ಚಿತ್ತಾಪುರ ಸ್ಟೇಷನ್ ತಾಂಡಾದಲ್ಲಿ ಹಸಿರು ಕ್ರಾಂತಿಗೆ ಎಲ್ಲರೂ ಕೈಜೋಡಿಸಿ: ಜಗದೀಶ್ ಚವ್ಹಾಣ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಹಸಿರು ಕ್ರಾಂತಿಗೆ ಪಣ ತೊಟ್ಟಿದ್ದು, ನೆಟ್ಟಿರುವ ಸಸಿಗಳನ್ನು ಸಂರಕ್ಷಣೆ ಮಾಡಿ ಉಳಿಸಿ ಬೆಳೆಸುವ ಮೂಲಕ ಎಲ್ಲರೂ ಕೈಜೋಡಿಸಬೇಕು ಎಂದು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಚವ್ಹಾಣ ಮನವಿ ಮಾಡಿದರು.
ಪಟ್ಟಣದ ಸ್ಟೇಷನ್ ತಾಂಡಾದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅರಣ್ಯ ಇಲಾಖೆ ಹಾಗೂ ಪುರಸಭೆ ಸಹಯೋಗದಲ್ಲಿ 100 ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೆಟ್ಟಿರುವ ಸಸಿಗಳನ್ನು ತಮ್ಮ ಮನೆಯ ಮಕ್ಕಳಂತೆ ಪೋಷಿಸಬೇಕು ಎಂದು ಕಿವಿಮಾತು ಹೇಳಿದರು.
ಹಸಿರು ಕ್ರಾಂತಿಗೆ ಒಂದು ಹೆಜ್ಜೆಯನ್ನು ಇಡಲಾಗಿದೆ. ಸುಮಾರು 100 ಗಿಡಗಳನ್ನು ಸ್ಟೇಷನ್ ತಾಂಡಾದ ಸೇವಾಲಾಲ್ ಜಗದಂಭ ದೇವಸ್ಥಾನ, ಬಂಜಾರ ಭವನ ಹತ್ತಿರ ಹಾಗೂ ಬಂಜಾರ ಸಮಾಜದ ರುದ್ರಭೂಮಿಯಲ್ಲಿ ಗಿಡಗಳನ್ನು ನೆಡಲಾಯಿತು. ಈ ತಾಂಡಾದ, ಮುಖಂಡರು, ನಿವಾಸಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

