Oplus_0

ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸುವಂತೆ ಎಐಡಿಎಸ್ಓ ಆಗ್ರಹ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲಗಳನ್ನು ನಿವಾರಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸುವಂತೆ ಆಗ್ರಹಿಸಿ ಸೋಮವಾರ ಎಐಡಿಎಸ್ಓ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪಟ್ಟಣದ ರೇವಣಸಿದ್ದಪ್ಪ ಕಾಂತಾ ಸರ್ಕಾರಿ ಪದವಿ ಕಾಲೇಜಿನ ಎದುರಿಗೆ ಪ್ರತಿಭಟನೆ ನಡೆಸಿದರು. ಈ ಕುರಿತು ಉನ್ನತ ಶಿಕ್ಷಣ ಸಚಿವರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

ಈ ವೇಳೆ ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ದೇವರಾಜು ಎಸ್. ರಾಜೋಳ್ಳಾ ಮಾತನಾಡಿ, ರಾಜ್ಯದಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳುಗಳೇ ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೇ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಆಗ್ರಹಿಸಿದರು.

ಈ ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ಸಿದ್ದಾರ್ಥ ತಿಪನೂರ, ತಾಲೂಕು ಸಂಚಾಲಕಿ ಪ್ರೀತಿ ದೊಡ್ಡಮನಿ ಸೇರಿದಂತೆ ವಿದ್ಯಾರ್ಥಿಗಳಾದ ದೇವರಾಜ , ತಿಪಣ್ಣ, ಭಾಗ್ಯಶ್ರೀ, ಪಲ್ಲವಿ, ಪ್ರಶಾಂತ ಹಾಗೂ ಹಲವಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!