ಚಿತ್ತಾಪುರ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ | ದೇಶದ ಭವಿಷ್ಯ ರೂಪಿಸುವ ಸಾಮರ್ಥ್ಯ ಶಿಕ್ಷಕರ ಕೈಯಲ್ಲಿದೆ: ನಾಗರೆಡ್ಡಿ ಪಾಟೀಲ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ದೇಶದ ಭವಿಷ್ಯ ರೂಪಿಸುವ ಸಾಮರ್ಥ್ಯ ಶಿಕ್ಷಕರ ಕೈಯಲ್ಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ ಹೇಳಿದರು.
ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚಿತ್ತಾಪುರ ಹಾಗೂ ಕರ್ನಾಟಕ ರಾಜ್ಯ ಸರಕಾರಿ, ಅನುದಾನಿತ. ಪ್ರಾಥಮಿಕ, ಪದವಿಧರ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ, ಚಿತ್ತಾಪೂರ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ 2025-26 ನೇ ಸಾಲಿನ ತಾಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇಶ ಕಟ್ಟುವ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ತಮ್ಮ ಮನಃಪರಿವರ್ತನೆ ಮಾಡಿಕೊಂಡಾಗ ಮಾತ್ರ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಲು ಸಾಧ್ಯ ಎಂದರು. ಶಿಕ್ಷಕರ ದಿನಾಚರಣೆಗೆ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆದರ್ಶ ವಿದ್ಯಾರ್ಥಿಗಳನ್ನು ತಯ್ಯಾರಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಾನಂದ ನಾಲವಾರ ಮಾತನಾಡಿ, ಮೊದಲಿಗಿಂತ ಶಿಕ್ಷಕರಿಗೆ ಗೌರವ ಕಡಿಮೆ ಆಗಲು ಕಾರಣವೇನು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು. ಬಿಸಿಯೂಟದ ಜವಾಬ್ದಾರಿಯಿಂದ ಶಿಕ್ಷಕರಿಗೆ ಮುಕ್ತಿ ಹಾಡಬೇಕು, ಶಿಕ್ಷಕರಿಗೆ ಬರೀ ಪಾಠ ಮಾಡಲು ಅವಕಾಶ ಮಾಡಬೇಕು ಎಂದು ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಹೀಗಾಗಿ ಅವರಿಗೆ ಶಿಕ್ಷಣ ಇಲಾಖೆ ಅಭಾರಿಯಿದೆ ಎಂದರು.
ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ನಾಗಪ್ಪ ಕಲ್ಲಕ್, ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷ ಸಂಗಣ್ಣಗೌಡ ಎಸ್.ಎಂ ಮಾತನಾಡಿದರು. ಇದೇ ಸಂದರ್ಭದಲ್ಲಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಸರ್ಕಾರಿ ಅರೆ ಸರ್ಕಾರಿ ಪ.ಜಾ./ಪ.ಪಂ. ನೌಕರರ ಸಂಘದ ಅಧ್ಯಕ್ಷ ಅರುಣಕುಮಾರ ಎಸ್. ಚೆಂಚನಸೂರ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಭೀಮರೆಡ್ಡಿ ಮಕಾಸಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಹೀರಾಲಾಲ ರಾಠೋಡ, ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಚಂದ್ರಾಮ ಅಮ್ಮನಗಡೆ, ಬಡ್ತಿ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ರವೀಂದ್ರ ರೆಡ್ಡಿ ಎನ್. ಶಿಕಾರಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ದೇವಿಂದ್ರ ರೆಡ್ಡಿ ದುಗನೂರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್, ಅನುದಾನಿತ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಸಂತೋಷ ಕೋಮಟೆ, ಅಬ್ದುಲ್ ಸಲೀಂ ಪ್ಯಾರೆ, ಅಂಬಣ್ಣ ಘಂಟಿ, ರಮೇಶ ಬಟಗೇರಿ, ಅಪ್ಪಯ್ಯ ಎಸ್. ಹಿರೇಮಠ, ವೆಂಕಟೇಶ ಕೆ, ಬಸವರಾಜ ಹೊಸಮನಿ, ಮಲ್ಲಣ್ಣ ತಳವಾರ, ಜಗದೇವರೆಡ್ಡಿ ಪಾಟೀಲ, ಶರಣು ಡೋಣಗಾಂವ ವೇದಿಕೆಯಲ್ಲಿದ್ದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ರೋಣದ್, ವಿನೋದ ಗೌಳಿ, ಆದಪ್ಪ ಬಗಲಿ, ಗಂಗಾಧರ್, ತಮ್ಮನ್ನಾ ಕೌಸರ್, ಸುಭಾಶ್ಚಂದ್ರ, ಸಾಬಣ್ಣ, ಗುರುಬಸಪ್ಪ, ದೇವಪ್ಪ ನಂದೂರಕರ್, ಮಲ್ಲಣ್ಣ ಮಾಸ್ಟರ್, ಬಿ.ಆರ್.ಪಿ, ಸಿ.ಆರ್.ಪಿ ಸೇರಿದಂತೆ ಇತರರು ಇದ್ದರು
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ಶಿವಲೀಲಾ ಕಲಗುರ್ಕಿ ಪ್ರಾರ್ಥಿಸಿದರು, ಬಿಆರ್’ಸಿ ಮಲ್ಲಿಕಾರ್ಜುನ ಸೇಡಂ ಸ್ವಾಗತಿಸಿದರು, ಶರಣಪ್ಪ ಅಬ್ಬಿಗೇರಿ ನಿರೂಪಿಸಿದರು.

