ಭ್ರಷ್ಟಾಚಾರ ವಿರೋಧಿ ಮತ್ತು ಮಾನವ ಹಕ್ಕುಗಳು ಸಂಸ್ಥೆಯ ಚಿತ್ತಾಪುರ ತಾಲೂಕು ಅಧ್ಯಕ್ಷರಾಗಿ ಮಲ್ಲಿನಾಥ ಇಂದೂರ ನೇಮಕ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಭ್ರಷ್ಟಾಚಾರ ವಿರೋಧಿ ಮತ್ತು ಮಾನವ ಹಕ್ಕುಗಳು ಸಂಸ್ಥೆಯ ಚಿತ್ತಾಪುರ ತಾಲೂಕು ಅಧ್ಯಕ್ಷರನ್ನಾಗಿ ಮಲ್ಲಿನಾಥ ಇಂದೂರ ಕಮರವಾಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಉತ್ತರ ಕರ್ನಾಟಕ ಅಧ್ಯಕ್ಷ ದಯಾನಂದ ಎಸ್.ಯಂಕಂಚಿ ತಿಳಿಸಿದ್ದಾರೆ.
ನೇಮಕಾತಿ ಪ್ರಮಾಣಪತ್ರ ನೀಡಿದ ಅಧ್ಯಕ್ಷರು, ಮಾನವ ಹಕ್ಕುಗಳ ಉಲ್ಲಂಘನೆ ಆದಾಗ ಹಾಗೂ ಭ್ರಷ್ಟಾಚಾರ ಕಂಡುಬಂದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವ ಮೂಲಕ ಜನಸಾಮಾನ್ಯರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದುಗೌಡ ನಾಲವಾರ, ವಿಕ್ರಂ ಪಾಟೀಲ ಮಾರಡಗಿ ಇದ್ದರು.

