ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ | ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಹರಿಸುವುದು ಮುಖ್ಯ: ಕಲ್ಲಶೆಟ್ಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಆರೋಗ್ಯಯುತ ಸಮಾಜ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಮುಖ್ಯವಾಗಿದೆ ಎಂದು ಪ್ರಾಚಾರ್ಯ ಸೋಮಶೇಖರ ಕಲಶೆಟ್ಟಿ ಹೇಳಿದರು.
ಪಟ್ಟಣದ ಶ್ರೀಮತಿ ಮಹಾದೇವಮ್ಮ ಬಿ. ಪಾಟೀಲ ಸ್ಮಾರಕ ಪಿಯು ಕಾಲೇಜಿನಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಚಿತ್ತಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲಾ ಸಂಪತ್ತುಗಿಂತ ಆರೋಗ್ಯ ಸಂಪತ್ತು ಪ್ರಮುಖ ಹೀಗಾಗಿ ಯಾರೂ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ಅಸಡ್ಡೆ ಮಾಡಬಾರದು ಆಗಾಗ ವೈದ್ಯರ ಹತ್ತಿರ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಅವರ ಸಲಹೆ ಸೂಚನೆಗಳಂತೆ ನಡೆಯಬೇಕಿದೆ ಎಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾಗಿ ಅಮೃತ ಕುಲಕರ್ಣಿ ಮಾತನಾಡಿ, ಮಹಿಳೆಯ ಆರೋಗ್ಯವೇ ಕುಟುಂಬದ ಬಲವರ್ಧನೆಗೆ ಮೂಲವಾಗಿದೆ ಎಂದು ಹೇಳಿದರು. ಇಡೀ ಕುಟುಂಬ ಮಹಿಳೆಯ ಮೇಲೆ ನಿಂತಿರುತ್ತದೆ ಹೀಗಾಗಿ ಮಹಿಳೆಯರು ಕೆಲಸದ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ನೀಡಬೇಕು ಎಂದು ಹೇಳಿದರು.
ಅತಿಥಿಯಾಗಿ ಖನಿಜಾ ಫಾತಿಮಾ ಮಾತನಾಡಿ, ಮಹಿಳೆಯರು ಆರೋಗ್ಯದ ಬಗ್ಗೆ ಜಾಗೃತರಾಗಬೇಕು ಹಾಗೂ ಸಮಾಜದಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಸುನಂದಾ, ಸುಹಾಸಿನಿ, ಕಲ್ಲಮ್ಮ ಅವರು ಮಾತನಾಡಿ, ಯುವಜನತೆ ಆರೋಗ್ಯಕರ ಕುಟುಂಬ ನಿರ್ಮಾಣದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು. ಖಾಜಾ ಹುಸೇನ್, ದತ್ತಾತ್ರೇಯ ಸುರೇ, ಅಖಿಲೇಶ್ ಕುಲಕರ್ಣಿ, ಮೊಹಿನ್, ಶಿವಾನಂದ ಯಡ್ಲಾ, ಕರಣ್ ಪಿ., ಕಂಚನ್ ಪಟ್ಟಾಡ, ಶೋರಭ್ ವ್ಯಾಸ್ ಸೇರಿದಂತೆ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಸ್ವಪ್ನಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತ್ತು.

