ಬೆಳಗೇರಿಯ ಬಂದಪ್ಪ ಕಟ್ಟಿಮನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಬೆಳಗೇರಿ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಬಂದಪ್ಪ ಕಟ್ಟಿಮನಿ ಅವರು ಇತ್ತೀಚೆಗೆ ಕಾಂಗ್ರೆಸ್ ತೊರೆದು, ಆಳಂದ ತಾಲೂಕಿನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿ ಗೆ ಸೇರ್ಪಡೆ ಆಗಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ಸಂತೋಷ ಗುತ್ತೇದಾರ ಆಳಂದ, ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ ಸೇರಿದಂತೆ ಇತರರು ಇದ್ದರು.

