ಅಲ್ಲೂರ್.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ಅಲ್ಲೂರ್.ಬಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯಗುರು ಸಾಬಣ್ಣ ತಿಳಿಸಿದ್ದಾರೆ.
ಸತತವಾಗಿ 2017-18, 2023, 2024, 2025-26ನೇ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬಾಲಕಿಯರ ಸಾಧನೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು, ಅತಿಥಿ ಶಿಕ್ಷಕರು, ಎಲ್.ಎಲ್.ಎಫ್ ಸಂಪನ್ಮೂಲ ವ್ಯಕ್ತಿಗಳು, ಊರಿನ ಹಿರಿಯರು, ಹಿರಿಯ ವಿದ್ಯಾರ್ಥಿಗಳು ಪಾಲಕ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

