Oplus_0

ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ ಮಂಜುರಾತಿಗೆ ಸಂಪುಟ ಸಭೆ ಅನುಮೋದನೆ ನೌಕರರ ಸಂಘ ಹರ್ಷ

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜೆ ಮಂಜುರಾತಿಗೆ ಸಂಪುಟ ಸಭೆ ಅನುಮೋದನೆ ನೀಡಿರುವುದಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಓಡಿಸಾ ಸರ್ಕಾರ 2024 ರಲ್ಲಿ ಮಹಿಳಾ ನೌಕರರಿಗೆ ವೇತನ ಸಹಿತ ಋತುಚಕ್ರ ರಜಾ ಸೌಲಭ್ಯವನ್ನು ಜಾರಿಗೆ ತಂದಿತ್ತು. ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿ ಜಾರಿಗೆ ತರಲು ಕಳೆದ ಜನವರಿ 10 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ರವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಕಾರ್ಮಿಕ ಸಚಿವ ಸಂತೋಷ ಲಾಡ್ ರವರು. ಕಾರ್ಮಿಕ ವರ್ಗದ ಎಲ್ಲಾ ಮಹಿಳಾ ನೌಕರರಿಗೂ ಈ ಯೋಜನೆ ಅನ್ವಯಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

ಈಚೇಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರಿ ಮಹಿಳಾ ನೌಕರರಿಗೆ ಹಾಗೂ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಋತು ಚಕ್ರ ರಜೆ ಮಂಜುರಾತಿಗೆ ಅನುಮೋದನೆ ನೀಡಿದ ಮುಖ್ಯಮಂತ್ರಿಗಳಿಗೆ ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಮತ್ತು ಈ ಸಂಬಂಧ ಅವಿರತ ಶ್ರಮ ವಹಿಸಿದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ರಾಜ್ಯದ 1 ಲಕ್ಷದ 80 ಸಾವಿರ ಮಹಿಳಾ ನೌಕರರು ತಿಂಗಳಿಗೆ ತಾವು ಬಯಸಿದ ಒಂದು ದಿವಸ ವೇತನ ಸಹಿತ ರಜೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಈ ಸಂಬಂಧ ಅಧಿಕೃತ ಆದೇಶವನ್ನು ಸರ್ಕಾರ ಅತೀ ಶೀಘ್ರದಲ್ಲಿ ಹೊರಡಿಸಲಿದೆ. ಈ ಮಹತ್ತರವಾದ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಪಧಾಧಿಕಾರಿಗಳಾದ ಮಹೇಶ ಹೂಗಾರ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಸುರೇಶ ಶರ್ಮಾ, ಚಂದ್ರಕಾಂತ ಏರಿ, ಎಂ.ಬಿ.ಪಾಟೀಲ, ಸುರೇಶ ವಗ್ಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!