ಮುತ್ತಗಾ ಗ್ರಾಮದ ನಿಜ ಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನ, ಕೋಲಿ ಸಮಾಜ ಆಕ್ರೋಶ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮತಕ್ಷೇತ್ರದ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ಮೂರ್ತಿ ಭಗ್ನಗೊಳಿಸಿ ಅವಮಾನಿಸಿದ ಘಟನೆ ಗುರುವಾರ ರಾತ್ರಿ ನಡೆದಿದ್ದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೂರ್ತಿಯ ಕೈ ಕಟ್ ಮಾಡಿ ಮುಖಕ್ಕೆ ಹೆಂಡ ಹೊಡೆದು ಅವಮಾನ ಮಾಡಿದ ಘಟನೆಯನ್ನು ಖಂಡಿಸಿದ ಕೋಲಿ ಸಮಾಜದ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಘಟನೆ ವಿಷಯ ತಿಳಿಯುತ್ತಿದ್ದಂತೆಯೇ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಜಗದೇವಪ್ಪಾ ಪಾಳಾ, ಶ್ವಾನದಳ ಅಧಿಕಾರಿಗಳು ಹಾಗೂ ಗ್ರಾಮ ಲೇಖಾಧಿಕಾರಿ ರೇವಣಸಿದ್ದಪ್ಪ ಪಾಟಿಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಖಂಡಿಸಿ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೋಲಿ ಸಮಾಜದ ಮುಖಂಡರು ಭಂಕೂರ ಕ್ರಾಸ್ ಹತ್ತಿರ ಪ್ರತಿಭಟನೆ ನಡೆಸಿದ್ದಾರೆ.

