ಬಸವೇಶ್ವರ ಶಾಲೆ ವಿದ್ಯಾರ್ಥಿಗಳು ಖೋ ಖೋ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ನಾಗಾವಿ ಎಕ್ಸಪ್ರೆಸ್ 

ವಾಡಿ: ಚಿತ್ತಾಪುರ ತಾಲೂಕು ಮಟ್ಟದ ಬಾಲಕರ ಖೋ ಖೋ ಪಂದ್ಯದಲ್ಲಿ ಹಲಕರ್ಟಿ ಬಸವೇಶ್ವರ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಜರುಗಿದ ಖೋ ಖೋ ಫೈನಲ್ ಪಂದ್ಯದಲ್ಲಿ ದಿಗ್ಗಾಂವ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ, ಕಾರ್ಯದರ್ಶಿ ಶರಣಕುಮಾರ ದೋಶೆಟ್ಟಿ ಹಾಗೂ ಉಪಾಧ್ಯಕ್ಷ ಭಾಗಣ್ಣ ಬುಕ್ಕಾ ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ತಾಲೂಕು ಧೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಪ್ರಶಸ್ತಿ ಪತ್ರ ವಿತರಿಸಿದರು.

Spread the love

Leave a Reply

Your email address will not be published. Required fields are marked *

You missed

error: Content is protected !!