Oplus_0

ಚಿತ್ತಾಪುರದಲ್ಲಿ ಪೊಲೀಸರಿಂದ ಪಥ ಸಂಚಲನ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದಲ್ಲಿ ಆರ್.ಎಸ್.ಎಸ್ ಪಥ ಸಂಚಲನ ವಿವಾದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರ ಮಾರ್ಗದರ್ಶನದ ಮೇರೆಗೆ ಡಿವೈಎಸ್ಪಿ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಭಾನುವಾರ ಪೊಲೀಸರು ಪಥ ಸಂಚಲನ ನಡೆಸಿದರು.

ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ರೋಟ್ ಮಾರ್ಚ್ ಸ್ಟೇಷನ್ ರಸ್ತೆ, ನಾಗಾವಿ ವೃತ್ತ, ಜನತಾ ವೃತ್ತ, ಕಪಡಾ ಬಜಾರ್, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣ ವೃತ್ತ, ಲಾಡ್ಡಿಂಗ್ ಕ್ರಾಸ್ ಮೂಲಕ ಬಸವೇಶ್ವರ ವೃತ್ತಕ್ಕೆ ತಲುಪಿತು.

ಈ ಸಂದರ್ಭದಲ್ಲಿ ಸಿಪಿಐಗಳಾದ ಚಂದ್ರಶೇಖರ ತಿಗಡಿ, ಜಗದೇವಪ್ಪ ಪಾಳಾ, ನಟರಾಜ್ ಲಾಡೆ, ಪ್ರಕಾಶ ಯಾತನೂರ, ಪಿಎಸ್ಐಗಳಾದ ತಿರುಮಲೇಶ್ ಕುಂಬಾರ, ಗೌತಮ್ ಗುತ್ತೇದಾರ, ಚಂದ್ರಕಾಂತ ಮೆಕಾಲೆ, ತಿಮ್ಮಯ್ಯ ಕಾಳಗಿ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಪೇದೆಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

You missed

error: Content is protected !!