ಯಾದಗಿರಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗಾಂಧಿ, ಶಾಸ್ತ್ರೀಜಿ ಜಯಂತಿ ಆಚರಣೆ
ನಾಗಾವಿ ಎಕ್ಸಪ್ರೆಸ್
ಯಾದಗಿರಿ: ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಆಚರಿಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ಮಾತನಾಡಿ, ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸೆ, ತ್ಯಾಗದ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಆದರ್ಶ ಗುಣಗಳು ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣವನ್ನು ನೀಡಿರುವ ಮಹಾನ್ ನಾಯಕ ಪ್ರಧಾನಿಯಾದರು ಸರಳತೆ ಇರುವ ನಾಯಕ ಎಂದು ಬಣ್ಣಿಸಿದರು.
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣ ಭೂಪಾಲ್ ರೆಡ್ಡಿ ನಾಯ್ಕಲ್, ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ದೇವೇಂದ್ರನಾಥ ನಾದ್, ಬಿಜೆಪಿ ಮುಖಂಡ ಮಹೇಶ್ ರೆಡ್ಡಿ ಮುದ್ನಾಳ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಅತ್ತಿಮನಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಕಟ್ಟಿಮನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಚವ್ಹಾಣ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ್ ರಾಯಚೂರು, ಮೌನೇಶ್ ನಗರಸಭೆ ಸದಸ್ಯರಾದ ಸ್ವಾಮೀದೇವ ದಾಸನಕೇರಿ, ಬೆಳಗೆರೆ ಲಕ್ಷ್ಮಿಪುತ್ರ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸೂರ್, ಅಜಯ್ ಮಡ್ಡಿಮಲ್ಲು, ಚಾಪಲ್, ರವಿ ಮುದ್ನಾಳ್, ಸ್ನೇಹ ರಾಸೋಳಕರ, ಶಕುಂತಲಾ ಗುಜ್ಜಲುರ, ಕರೆಮ್ಮ ಬಿಮಬಾಯಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ವಿವಿಧ ಮೋರ್ಚಾ, ಪ್ರಕೋಷ್ಠ ಹಾಗೂ ಅಭಿಯಾನದ ಪದಾಧಿಕಾರಿಗಳು, ಸಂಚಾಲಕರು- ಸಹ-ಸಂಚಾಲಕರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.