ಮಾದಿಗ ದಂಡೋರ ಜಿಲ್ಲಾ ಉಪಾಧ್ಯಕ್ಷರಾಗಿ ಜಗದೀಶ ಮುಕನಾಳ ಆಯ್ಕೆ
ನಾಗಾವಿ ಎಕ್ಸಪ್ರೆಸ್
ವಾಡಿ: ಮಾದಿಗ ದಂಡೋರ ರಾಜ್ಯಾಧ್ಯಕ್ಷ ಬಿ.ನರಸಪ್ಪ ದಂಡೋರ ಆದೇಶದ ಮೇರೆಗೆ ಜಗದೀಶ ಮುಕನಾಳ ವಾಡಿ ಇವರನ್ನು ಕಲಬುರಗಿ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸುಂದರ ಡಿ.ಸಾಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾದಿಗ ಸಮಾಜವನ್ನು ಸಂಘಟಿಸುವ ಮೂಲಕ ರಾಜ್ಯ ಹಾಗೂ ಜಿಲ್ಲಾ ಸಂಘದ ಮಾರ್ಗದರ್ಶನದಲ್ಲಿ ಮುನ್ನಡೆಯುವ ನಿಟ್ಟಿನಲ್ಲಿ ಸಮುದಾಯದ ಜನರನ್ನು ಸಂಘಟಿಸಿ ಅವರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

