Oplus_0

ಚಿತ್ತಾಪುರ ಆರ್.ಎಸ್.ಎಸ್ ಪಥ ಸಂಚಲನ ಮತ್ತೇ ಮುಂದೂಡಿಕೆ | ನ.5 ಕ್ಕೆ ಶಾಂತಿ ಸಭೆ ನ.7 ರಂದು ವಿಚಾರಣೆ ಹೈಕೋರ್ಟ್ ಮಹತ್ವದ ಆದೇಶ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಇದೇ ನವೆಂಬರ್ 2ರಂದು ಚಿತ್ತಾಪುರದಲ್ಲಿ  ಆರ್.ಎಸ್.ಎಸ್ ಪಥಸಂಚಲನ ಸಂಬಂಧ ಹೈ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಕ್ಟೋಬರ್ 30 ರಂದು ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ.

ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಕೋರ್ಟ್ ಸೂಚಿಸಿ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ. ಹೀಗಾಗಿ ನವೆಂಬರ್ 2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್.ಎಸ್.ಎಸ್ ಗೆ ಹಿನ್ನಡೆಯಾದಂತಾಗಿದೆ.

Spread the love

Leave a Reply

Your email address will not be published. Required fields are marked *

error: Content is protected !!