Oplus_0

ಚಿತ್ತಾಪುರ ಸರ್ಕಾರಿ ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾಕೂಟ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕಿನ ಮಲಕೂಡ ಗ್ರಾಮದ 10ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ 3 ಕಿ.ಮೀ. ಕಾಲುನುಡಿಗೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪಟ್ಟಣದ ಬಹಾರಪೇಟ್ ಬಡಾವಣೆಯ 10ನೇ ತರಗತಿ ವಿದ್ಯಾರ್ಥಿ ಶ್ರೀಶೈಲ್ ಗುಂಡು ಎಸೆತ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಮುಖ್ಯಶಿಕ್ಷಕ ಸಂತೋಷಕುಮಾ‌ರ್ ಜಮಾದಾ‌ರ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಎಸ್ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ, ಹಾಗೂ ಸದಸ್ಯರು, ಸಹ ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!