ವಾಡಿ ಪಟ್ಟಣದಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ
ನಾಗಾವಿ ಎಕ್ಸಪ್ರೆಸ್
ವಾಡಿ: ಪಟ್ಟಣದ ಶ್ರೀನಿವಾಸ್ ಗುಡಿ ಚೌಕ್(ಗೇಟ್ ಏರಿಯಾ) ಹತ್ತಿರ ನಮ್ಮ ಕರ್ನಾಟಕ ಸೇನೆ ವತಿಯಿಂದ 70 ನೇಯ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಅರ್ಚನೆ, ಪೂಜೆ ಮತ್ತು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳು ಸಲ್ಲಿಸಿದರು.
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆಯ ಕಲ್ಯಾಣ ಕರ್ನಾಟಕ ರೈತ ಸಂಘದ ಅಧ್ಯಕ್ಷ ಸುರೇಶ್ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ಪ್ರಭು ಹಲಕರ್ಟಿ, ತಾಲೂಕು ಅಧ್ಯಕ್ಷ ಸುನೀಲ್ ಗುತ್ತೇದಾರ, ಉಪಾಧ್ಯಕ್ಷ ನಾಗರಾಜ್ ಬನ್ಸೋಡೆ, ವಾಡಿ ವಲಯ ಅಧ್ಯಕ್ಷ ಸಿದ್ದು ಎಸ್ ಪೂಜಾರಿ, ಮಹೇಶ್ ದೊಡ್ಡಮನಿ, ಮಲ್ಲಯ್ಯ ಗುತ್ತೇದಾರ, ನಾಗೇಂದ್ರ ಜೈಗಂಗಾ, ತುಳಸಿರಾಮ್ ಶಿಂಧೆ, ಅವಿನಾಶ್ ಗುತ್ತೇದಾರ ಸೇರಿದಂತೆ ಇತರರು ಇದ್ದರು.

