ಕಲಬುರಗಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷರಾಗಿ ಮಹೇಶ್ವರಿ ಶಿವಕುಮಾರ ವಾಲೆ ನೇಮಕ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಜಿಲ್ಲಾ ಜನತಾದಳ (ಜಾತ್ಯಾತೀತ) ಪಕ್ಷದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಮಹೇಶ್ವರಿ ಶಿವಕುಮಾರ ವಾಲೆ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಗುರುತರವಾದ ಜವಾಬ್ದಾರಿಯನ್ನು ಕೂಡಲೇ ವಹಿಸಿಕೊಂಡು, ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯಲ್ಲಿ ಜನತಾದಳ (ಜಾತ್ಯಾತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಿದ್ದಾರೆ.

