ಗುರುಮಠಕಲ್: ಮಹಾತ್ಮ ಗಾಂಧಿ ಹಾಗೂ ಶಾಸ್ತಿ ಜಯಂತಿ ಅಚರಣೆ
ದೇಶಕ್ಕೆ ಸ್ವಾತಂತ್ರ್ಯ ತಂದು ಯಕೊಡುವಲ್ಲಿ ಗಾಂಧಿಜೀ ಅಗ್ರಗಣ್ಯರು: ಚಿಂಚನಸೂರ
ನಾಗಾವಿ ಎಕ್ಸಪ್ರೆಸ್
ಗುರುಮಠಕಲ್: ಮಹಾತ್ಮಾ ಗಾಂಧೀಜಿ ನೇತೃತ್ವದಲ್ಲಿ ಲಕ್ಷಾಂತರ ಜನರು ಮಾಡಿದ ತ್ಯಾಗ ಮತ್ತು ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿತು. ಗಾಂಧೀಜಿ ಅವಿಸ್ಮರಣೆಯರು ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರ ಅಭಿಪ್ರಾಯಪಟ್ಟರು.
ಪಟ್ಟಣದ ಗಾಂಧಿ ಮೈದಾನದಲ್ಲಿ ಬುಧವಾರ ಸೈದಾಪುರ ಮತ್ತು ಗುರುಮಠಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಗಾಂಧೀಜಿ ಮತ್ತು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಗಾಂಧಿಜೀ ಅಗ್ರಗಣ್ಯರು ಎಂದರು.
ಬ್ರಿಟೀಷರ ಕಪಿಮುಷ್ಟಿಯಲ್ಲಿದ್ದ ದೇಶವನ್ನು ಸ್ವಾತಂತ್ರ್ಯ ಗೊಳಿಸುವುದು ಸುಲಭದ ಮಾತಾಗಿರಲಿಲ್ಲ, ಈ ನಿಟ್ಟಿನಲ್ಲಿ ಹೊಸ ಪೀಳಿಗೆಗೆ ಸ್ವಾತಂತ್ರ್ಯ ಚಳುವಳಿಯ ಇತಿಹಾಸ ತಿಳಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಚಪೇಟ್ಲಾ ಮಾತನಾಡಿ, ಬೆಳಗಾವಿಯಲ್ಲಿ 1924ರ ಬೆಳಗಾವಿಯ ಅಧಿವೇಶನದ ಶತಮಾನೋತ್ಸವದ ಹಿನ್ನಲೆ ರಾಜ್ಯದೆಲ್ಲೆಡೆ ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಸಾಯಬಣ್ಣ ಬೋರಬಂಡಾ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೇಣಿಕಕುಮಾರ ದೋಖಾ. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಲಕ್ಷ್ಮೀಕಾಂತರೆಡ್ಡಿ ಪಲ್ಲ, ಸಂಜೀವಕುಮಾರ ಚಂದಾಪುರ, ಖಾಜಾ ಮೈನೋದ್ದಿನ್, ವೆಂಕಟ ರಾಮುಲು ಗೌಡ ಪುಟಪಾಕ, ದೇವಪ್ಪ ಗೌಡ ರಾಚನಳ್ಳಿ, ಸಾಬಣ್ಣ ಹೂಗಾರ, ಸೈಯದ್ ಬಾಬಾ, ಫಯಾಜ್ ಅಹ್ಮರ್, ಹುಸೆನಪ್ಪ, ಕಾಶಪ್ಪ ಸೇರಿದಂತೆ ಉಪಸ್ಥಿತರಿದ್ದರು.