ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು | ಚಿತ್ತಾಪುರದಲ್ಲಿ ಬಿಜೆಪಿ ವಿಜಯೋತ್ಸವ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಬಿಹಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದ್ದರಿಂದ ಚಿತ್ತಾಪುರ ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಬಿಜೆಪಿ ಮುಖಂಡರು ಶುಕ್ರವಾರ ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್, ನಗರಾಧ್ಯಕ್ಷ ಆನಂದ ಪಾಟೀಲ ನರಿಬೋಳ, ಪುರಸಭೆ ಸದಸ್ಯ ನಾಗರಾಜ ಭಂಕಲಗಿ, ಮುಖಂಡರಾದ ದೀಪಕ್ ಹೊಸ್ಸುರಕರ್, ಗೋಪಾಲ ರಾಠೋಡ, ಅಶ್ವಥ್ ರಾಠೋಡ, ಕೋಟೇಶ್ವರ ರೇಷ್ಮಿ, ಉದಯಕುಮಾರ್ ಸಿಂಪಿ, ನಾಗುಬಾಯಿ ಜಿತುರೆ, ಅಕ್ಕಮಹಾದೇವಿ ನಾಗೇಶ್, ಮೇಘರಾಜ ಗುತ್ತೇದಾರ, ಯಮನಪ್ಪ ಬೋಸಗಿ, ಬಸವರಾಜ ಸಂಕನೂರ, ಹನುಮಾನ್ ವ್ಯಾಸ್, ಶಿವರಾಮ ಚವ್ಹಾಣ, ರಾಜು ದೊರೆ, ಸಂಜಯ ರಾಠೋಡ ಸೇರಿದಂತೆ ಇತರರು ಇದ್ದರು.

