Oplus_0

ಮಾಲಗತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಪೋಷಕ ಶಿಕ್ಷಕರ ಮಹಾಸಭೆ 

ನಾಗಾವಿ ಎಕ್ಸಪ್ರೆಸ್

ಶಹಾಬಾದ: ಎಷ್ಟೇ ಬಡತನ ಇದ್ದರೂ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ಮರೆಯಬೇಡಿ, ಸರ್ಕಾರ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ‌ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಹೀಗಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಾತಿ ಮಾಡಿಸಿ ಶಿಕ್ಷಣ ಕೊಡಿಸಿ ಎಂದು ಗ್ರಾಮ ಪಂಚಾಯತ್ ಪಿಡಿಒ ಕವಿತಾ ಸಿ ಹೇಳಿದರು.

ತಾಲೂಕಿನ ಮಾಲಗತ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ ಶಿಕ್ಷಕರ ಮಹಾಸಭೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹಳ ಪ್ರಮುಖವಾಗಿದೆ, ಮನೆಯಲ್ಲಿಯೇ ಹೆಚ್ಚು ಸಮಯ ಕಳೆಯುವ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅವರ ಜೀವನಕ್ಕೆ ಒಂದು ಒಳ್ಳೆಯ ಅಡಿಪಾಯ ಹಾಕಬೇಕು ಎಂದು ಕಿವಿಮಾತು ಹೇಳಿದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ರಾಜಶೇಖರ್ ಬಾಳಿ, ಶಂಕರ್ ಪವಾರ್, ಮುಖ್ಯೋಪಾಧ್ಯಾಯ ಶಿವಾನಂದ ಅಲ್ಲೂರ್, ಈಶ್ವರ್ ಬಿ ಮುಗುಳನಾಗಾಂವ, ಹನುಮಂತ ಬಾಳಕ್, ವಿಜಯಕುಮಾರ್ ಕಟ್ಟಿ, ಬಸಲಿಂಗಪ್ಪ ಕಟ್ಟಿ, ರವಿ ಕುಂಶಿ, ರೇವಣಸಿದ್ದ ಸಾಲಳ್ಳಿ ಸೇರಿದಂತೆ ಶಿಕ್ಷಕ ವೃಂದದವರು, ಗ್ರಾಮದ ಪೋಷಕರು, ಗ್ರಾಮಸ್ಥರು ತಾಯಿಂದರು ಪಾಲ್ಗೊಂಡಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!