ಕಲಬುರಗಿ ಕೇಂದ್ರ ಕಾರಾಗೃಹದ ಸಂದರ್ಶಕರ ಮಂಡಳಿಗೆ ಇಮಾನವೆಲ್ ಡೇವಿಡ್ ನಾಮನಿರ್ದೇಶನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಲಬುರಗಿ ಕೇಂದ್ರ ಕಾರಾಗೃಹದ ಸಂದರ್ಶಕರ ಮಂಡಳಿಗೆ ಅಧಿಕಾರೇತರ ಸದಸ್ಯರನ್ನಾಗಿ ಹೊಸದಾಗಿ ಚಿತ್ತಾಪುರ ಸಮಾಜ ಸೇವಕ ಇಮಾನವೆಲ್ ಡೇವಿಡ್ ಇಟಗಾ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಕೇಂದ್ರ ಕಾರಾಗೃಹ ಕಲಬುರ್ಗಿ ಮುಖ್ಯ ಅಧೀಕ್ಷಕ ಬಿ.ಸುರೇಶ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಮಹಾನಿರ್ದೇಶಕರು, ಕಾರಾಗೃಹ ಮತ್ತು ಸುಧಾರಣೆ ಸೇವೆ, ಕರ್ನಾಟಕ ರಾಜ್ಯ, ಬೆಂಗಳೂರುರವರ ಪತ್ರದಲ್ಲಿ ಕರ್ನಾಟಕ ಕಾರಾಗೃಹಗಳ ನಿಯಮಗಳು, 1974 ರ ನಿಯಮ 187(2) ರ ಅನ್ವಯ ಕಲಬುರಗಿ ಕೇಂದ್ರ ಕಾರಾಗೃಹದ ಸಂದರ್ಶಕರ ಮಂಡಳಿಗೆ ಸ್ಥಳೀಯ ಅಧಿಕಾರೇತರ ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ, ಇವರ ಅಧಿಕಾರಾವಧಿ ಎರಡು ವರ್ಷ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.