Oplus_0

ವಾಡಿ ಸಮೀಪದ ಅಂಬೇಡ್ಕರ್, ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಸ್ಥಳೀಯರನ್ನು ನೇಮಕ ಮಾಡಿಕೊಳ್ಳುವಂತೆ ಕರವೇ ಆಗ್ರಹ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕಿನ ವಾಡಿ ಪಟ್ಟಣದ ಹೊರ ವಲಯದಲ್ಲಿರುವ ಎಜುಕೇಶನ್ ಹಬ್ ನಲ್ಲಿ ಇರುವ ಡಾ. ಅಂಬೇಡ್ಕರ್ ವಸತಿ ಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಎಲ್ಲಾ ಡಿ ಗ್ರೂಪ್ ಹುದ್ದೆಗಳಿಗೆ ಸ್ಥಳೀಯರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಕರವೇ (ನಾರಾಯಣ ಗೌಡ ಬಣ) ವಾಡಿ ವಲಯ ಅಧ್ಯಕ್ಷ ಶಿವುಕುಮಾರ ಗುತ್ತೇದಾರ ನೇತೃತ್ವದಲ್ಲಿ ಮುಖಂಡರು ಸಮಾಜ ಕಲ್ಯಾಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಈ ಮೂರು ವಸತಿ ಶಾಲೆಗಳಲ್ಲಿ ಪ್ರಸ್ತುತ ಬೇರೆ ಬೇರೆ ಜಿಲ್ಲೆ ಹಾಗೂ ತಾಲೂಕುಗಳ ಜನರನ್ನು ಭರ್ತಿ ಮಾಡಿಕೊಳ್ಳುವ ಮೂಲಕ ಸ್ಥಳೀಯರಿಗೆ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಇದರಿಂದ ಸ್ಥಳೀಯರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ಹೇಳಿದರು.

ಈ ಕೂಡಲೇ ಕಡ್ಡಾಯವಾಗಿ ಸ್ಥಳೀಯರನ್ನು ನೇಮಕ ಮಾಡಿಕೊಳ್ಳಬೇಕು ಇಲ್ಲದಿದ್ದರೆ ಶಾಲೆಗಳ, ಹಾಗೂ ಅಧಿಕಾರಿಗಳ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ತಾಲೂಕು ಸಹ ಕಾರ್ಯದರ್ಶಿ ಗಣೇಶ್ ರಾಠೋಡ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರವೇ ಇಂಗಳಗಿ ವಲಯ ಸಂಚಾಲಕ ಸಾಬಯ್ಯ ಗುತ್ತೇದಾರ, ವಾಡಿ ಘಟಕದ ವಿಕಲಚೇತನ ಅಧ್ಯಕ್ಷ ದುರ್ಗದಾಸ್ ಮಹಾರಾಜ್ ಹಾಗೂ ಅರ್ಜುನ್ ಕಟ್ಟಿಮನಿ, ಶಶಿಕುಮಾರ್, ನಾಲವಾರ ಘಟಕ ಅಧ್ಯಕ್ಷ ರಾಜೇಶ್ ಗುತ್ತೇದಾರ, ಸಂತೋಷ್ ಕುಮಾರ್ ರಾಠೋಡ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!