ಕಲಬುರಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ವಾರ್ಷಿಕ ಸರ್ವಸದಸ್ಯರ ಮಹಾಸಭೆ ನಾಳೆ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ಇದರ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ದಿ.31 ರಂದು ನಾಳೆ ಬುಧವಾರ ಸಾಯಂಕಾಲ 5.30 ಗಂಟೆಗೆ ನಗರದ ಕನ್ನಡ ಭವನದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ ತಿಳಿಸಿದ್ದಾರೆ.
ಈ ಮಹತ್ವಪೂರ್ಣವಾದ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ನೌಕರರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸಲು ಕೋರಿದ್ದಾರೆ.
ಸಭೆಯ ವಿಷಯ ಸೂಚಿ: 1.4.2024 ರಿಂದ 31.3.2025 ವರೆಗೆ ಜಮಾ-ಖರ್ಚು, ವೆಚ್ಚದ ವರದಿ, ಮಂಡನೆ ಅನುಮೋದನೆ, 2. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ, 3. ಕರ್ನಾಟಕ ಆರೋಗ್ಯ ಸಂಜೀವಿನಿ ಕುರಿತು ಮಾಹಿತಿ/ಕಾರ್ಯಾಗಾರ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ, 4. 2025 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಪೂರ್ವಸಿದ್ದತೆ ಬಗ್ಗೆ, 5. 2026 ನೇ ಸಾಲಿನ ಕ್ಯಾಲೆಂಡರ್ ವಿತರಣೆ ಬಗ್ಗೆ, 6. ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

