Oplus_0

ಜ.10 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಶಾಖೆಯ ವಾರ್ಷಿಕ ಸರ್ವಸದಸ್ಯರ ಮಹಾಸಭೆ: ಮಹೇಶ ಹೂಗಾರ 

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಲಬುರಗಿ ಇದರ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಇದೇ ಜ.10 ರಂದು 11.30 ಗಂಟೆಗೆ  ನಗರದ ಕನ್ನಡ ಭವನದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಬಳೂಂಡಗಿ ರವರ ಅಧ್ಯಕ್ಷತೆಯಲ್ಲಿ ಜರುಗುವುದು ಎಂದು ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ ತಿಳಿಸಿದ್ದಾರೆ.

ಈ ಮಹತ್ವಪೂರ್ಣವಾದ ಮಹಾಸಭೆಯಲ್ಲಿ ಜಿಲ್ಲಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ನೌಕರರು ಈ ಸಭೆಯಲ್ಲಿ ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸಲು ಕೋರಿದ್ದಾರೆ.

ಸಭೆಯಲ್ಲಿ ಚರ್ಚಿಸುವ ವಿಷಯಗಳು: 

1 ಎಪ್ರಿಲ್ 2024 ರಿಂದ 31 ಮಾರ್ಚ್ 2025 ವರೆಗೆ ಜಮಾ-ಖರ್ಚು, ವೆಚ್ಚದ ವರದಿ, ಮಂಡನೆ/ಅನುಮೋದನೆ, ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ, ಕರ್ನಾಟಕ ಆರೋಗ್ಯ ಸಂಜೀವಿನಿ ಕುರಿತು ಮಾಹಿತಿ/ಕಾರ್ಯಾಗಾರ ಹಮ್ಮಿಕೊಳ್ಳುವ ಬಗ್ಗೆ ಚರ್ಚೆ, 2025 ನೇ ಸಾಲಿನ ವಾರ್ಷಿಕ ಕ್ರೀಡಾಕೂಟದ ಪೂರ್ವಸಿದ್ದತೆ ಬಗ್ಗೆ, 2026 ನೇ ಸಾಲಿನ ಕ್ಯಾಲೆಂಡರ್ ವಿತರಣೆ ಬಗ್ಗೆ, ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!