Oplus_0

ಕಲಬುರಗಿ ಜಿಲ್ಲಾ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಜಯಪ್ರಕಾಶ್ ಕಮಕನೂರ ಸರ್ವಾನುಮತದಿಂದ ಆಯ್ಕೆ

ನಾಗಾವಿ ಎಕ್ಸಪ್ರೆಸ್

ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಕಲಬುರಗಿ ಜಿಲ್ಲಾ ಜಯಂತೋತ್ಸವ ಸಮಿತಿಯ ಅಧ್ಯಕ್ಷರಾಗಿ ಜಯಪ್ರಕಾಶ್ ಕಮಕನೂರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಜಯಂತಿ ನಿಮಿತ್ತ ನಡೆದ ಪೂರ್ವಭಾವಿ ಸಭೆಯಲ್ಲಿ ಕಲಬುರಗಿ ಜಿಲ್ಲಾ ಜಯಂತೋತ್ಸವ ಸಮಿತಿ ಅಧ್ಯಕ್ಷರಾಗಿ ಜಯಪ್ರಕಾಶ್ ಕಮಕನೂರ ಆಯ್ಕೆಯಾಗಿದ್ದು, ಇವರು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಪುತ್ರರಾಗಿರುವುದು ವಿಶೇಷ.

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ, ಅಪಾರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕನ್ನಡ ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕಿ ಜಗದೀಶ್ವರಿ ಶಿವಕೇರಿ ವೇದಿಕೆಯಲ್ಲಿದ್ದರು.

ಸಭೆಯಲ್ಲಿ ಕೋಲಿ ಸಮಾಜದ ಮುಖಂಡರಾದ ಸಂದೇಶ ಕಮಕನೂರ, ಸುರೇಶ್ ಕಮಕನೂರ, ಸಿದ್ದು ಜಮಾದಾರ್, ಬಸವರಾಜ ಹರವಾಳ, ಬಸವರಾಜ ಬೂದಿಹಾಳ, ರಮೇಶ್ ನಾಟೀಕಾರ, ರಮೇಶ್ ಜಮಾದಾರ್, ಶ್ರೀಕಾಂತ್ ಆಲೂರ, ಗುಂಡು ಐನಾಪೂರ, ರಾಜು ಸೊನ್ನ, ಮಲ್ಲಿಕಾರ್ಜುನ ವಾಲೀಕಾರ, ಆನಂದ ಕದ್ದರಗಿ, ಸಂತೋಷ ಸೇರಿದಂತೆ ಇತರರು ಇದ್ದರು.

ಅಂಬಿಗರ ಚೌಡಯ್ಯ ಜಯಂತಿ ಅದ್ದೂರಿ ಆಚರಣೆ: ಕಮಕನೂರ 

ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತೋತ್ಸವ ಈ ಬಾರಿ ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಮಾಡಲಾಗುವುದು ಎಂದು ಜಯಂತೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಜಯಪ್ರಕಾಶ್ ಕಮಕನೂರ ಹೇಳಿದರು.

ಜಯಂತಿ ಕಾರ್ಯಕ್ರಮ ಯಶಸ್ವಿಗೆ ಸಮಾಜದ ಮುಖಂಡರು, ಯುವಕರು ಸೇರಿದಂತೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

Spread the love

Leave a Reply

Your email address will not be published. Required fields are marked *

error: Content is protected !!