ನಾಗಾವಿಗೆ ಹೋಗುವ ರಸ್ತೆ ಸುಧಾರಣೆ, ಸ್ವಚ್ಛತೆಗೆ ನಾಗರಿಕರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಿಂದ ನಾಗಾವಿ ಯಲ್ಲಮ್ಮ ದೇವಸ್ಥಾನದ ವರೆಗಿನ ರಸ್ತೆ ಸುಧಾರಣೆ ಹಾಗೂ ಸ್ವಚ್ಛತೆ ಮಾಡುವಂತೆ ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ರಾಷ್ಟ್ರಕೂಟರ ಮನೆತನದ ಕುಲದೇವತೆ ಶ್ರೀ ನಾಗಾವಿ ಯಲ್ಲಮ್ಮ ದೇವಿಯ ಪಲ್ಲಕ್ಕಿ ಉತ್ಸವ ಇದೇ ಅಕ್ಟೋಬರ್ 17 ರಂದು ನಡೆಯಲಿದ್ದು , ಈ ಉತ್ಸವಕ್ಕೆ ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳಾದ ತೆಲಂಗಾಣ, ಆಂದ್ರಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಸಾಕಷ್ಟು ಭಕ್ತರು ಆಗಮಿಸುತ್ತಾರೆ ಹಾಗೂ ಪಲ್ಲಕ್ಕಿ ಉತ್ಸವ ಕೊಡ ಇದೇ ರಸ್ತೆ ಮಾರ್ಗವಾಗಿ ಸಾಗುತ್ತದೆ ಹೀಗಾಗಿ ರಸ್ತೆ ಉದ್ದಕ್ಕೂ ಇರುವ ತಗ್ಗು ಗುಂಡಿಗಳನ್ನು ಮುಚ್ಚುವ ಮೂಲಕ ಅಲ್ಲಲ್ಲಿ ಹಾಳಾದ ರಸ್ತೆ ಸುಧಾರಣೆ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಖಬರಸ್ಥಾನ್ ರಸ್ತೆಯ ಅಕ್ಕ-ಪಕ್ಕದಲ್ಲಿ ಸಾರ್ವಜನಿಕರು ಮಲ ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇಂತಹ ಜಾತ್ರಾ ಮಹೋತ್ಸವ ಸಮಯದಲ್ಲಿ ಹೋರ ಜಿಲ್ಲಾ, ರಾಜ್ಯಗಳಿಂದ ಬರುವ ಭಕ್ತಾದಿಗಳಿಗೆ ಮಾನಸಿಕ ಹಿಂಸೆ ಆಗಲಿದೆ ಹೀಗಾಗಿ ತಹಸೀಲ್ದಾರ್ ಹಾಗೂ ದೇವಸ್ಥಾನ ಸಮಿತಿ ಅಧ್ಯಕ್ಷರೂ ಆದ ನಾಗಯ್ಯ ಹಿರೇಮಠ ಮತ್ತು ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರು ಕೂಡಲೇ ಎಚ್ಚೆತ್ತುಕೊಂಡು ಆಗಬೇಕಾದ ಕೆಲಸ ಕಾರ್ಯಗಳ ಕಡೆ ಅದರಲ್ಲಿಯೂ ಸ್ವಚ್ಛತೆಗೆ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ.
ಪಲ್ಲಕ್ಕಿ ಉತ್ಸವಕ್ಕೆ ಇನ್ನೂ ಒಂದು ವಾರ ಕಾಲಾವಕಾಶ ಇದೆ ಹೀಗಾಗಿ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಉತ್ಸವಕ್ಕೂ ಮುಂಚೆ ರಸ್ತೆ ಸುಧಾರಣೆ ಮಾಡಿ ಭಕ್ತರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ಖಬರಸ್ಥಾನ್ ಹತ್ತಿರ ದೊಡ್ಡ ಗಾತ್ರದ ಗುಂಡಿ ನಿರ್ಮಾಣವಾಗಿದೆ ಅನಾಹುತಕ್ಕೆ ಅವಕಾಶ ನೀಡುವ ಮುಂಚೆಯೇ ಕೂಡಲೇ ಅದನ್ನು ಮುಚ್ಚಿ ದುರಸ್ತಿ ಮಾಡಬೇಕು ಮತ್ತು ನಿತ್ಯ ಬ್ಲಿಚಿಂಗ್ ಪೌಡರ್ ಸಿಂಪಡಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಭಕ್ತರು ಆಗ್ರಹಿಸಿದ್ದಾರೆ.