ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನಕ್ಕೆ ಕೆಯುಡಬ್ಲ್ಯೂಜೆ ತೀವ್ರ ಸಂತಾಪ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ವಿಜಯ ಕರ್ನಾಟಕ ಪತ್ರಿಕೆಯ ಉಪ ಸಂಪಾದಕರಾಗಿ ಕಲಬುರಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ (52) ಅವರು ಶನಿವಾರ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯ ಕರ್ನಾಟಕ ಪತ್ರಿಕೆಯ ಉಪ ಸಂಪಾದಕರಾಗಿ ಸೇವೆಯಲ್ಲಿದ್ದರು.
ಕೆಯುಡಬ್ಲೂೃಜೆ ಸಂತಾಪ:
ಕಲಬುರಗಿ ಜಿಲ್ಲೆಯಲ್ಲಿ ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ, ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾoವ, ಹಿರಿಯ ಪತ್ರಕರ್ತರಾದ ಶರಣು ಗೊಬ್ಬರ, ಶಿವರಂಜನ್ ಸತ್ಯಂಪೇಟೆ, ಚಂದ್ರಶೇಖರ ಕವಲಗಾ, ದೇವಿಂದ್ರಪ್ಪ ಅವಂಟಿ, ವಿರೇಂದ್ರ ಕೊಲ್ಲೂರು, ಕಾಶಿನಾಥ ಗುತ್ತೇದಾರ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಒಬ್ಬ ಕ್ರಿಯಾಶೀಲ, ಉತ್ಸಾಹಿ ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

