ವಿಕ್ರಮ್ ತೇಜಸ್ ನೇತೃತ್ವದ ನಿಯೋಗ ಅಪಾರ ಜಿಲ್ಲಾಧಿಕಾರಿಗೆ ಮನವಿ | ವಾಡಿ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ 25 ಕೋಟಿ ಅನುದಾನ ಮಂಜೂರು ಮಾಡಲು ಹೋರಾಟ ಸಮಿತಿ ಆಗ್ರಹ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣವಾಗಿತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಡಾ.ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬರೆದ ಮನವಿ ಪತ್ರವನ್ನು ಮಂಗಳವಾರ ಅಪಾರ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರವು ಈಗಾಗಲೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ್ಣದಲ್ಲಿ ಡಾ.ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಲು 10 ಎಕರೆ ಭೂಮಿ ಮಂಜೂರು ಮಾಡಿ 3 ಕೋಟಿ ಅನುದಾನ ನೀಡಿದ್ದು, ಕೃತಜ್ಞಾರ್ಯ ಕಾರ್ಯ ಎಂದರು.
ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದ ಭಾಗವಾಗಿ, ವಸ್ತು ಸಂಗ್ರಹಾಲಯ, ಸಂಶೋಧನ ಕೇಂದ್ರ, ಅತ್ಯಾಧುನಿಕ ಅಂತರಾಷ್ಟ್ರೀಯ ಗ್ರಂಥಾಲಯ ನಿರ್ಮಾಣ, ಉದ್ಯಾನ ವನ, ಬೌದ್ಧದಮ್ಮ ಅಧ್ಯಯನ ಕೇಂದ್ರ, ಸಭಾಂಗಣ, ಅತಿಥಿಗೃಹ ಹಾಗೂ ಬಾಬಾ ಸಾಹೇಬರು ಸ್ಥಳೀಯರೊಂದಿಗೆ ತೆಗೆಸಿಕೊಂಡ ಭಾವಚಿತ್ರದ ಬೃಹತ್ ಪ್ರತಿಮೆ ನಿರ್ಮಾಣ, ಪರಿಶಿಷ್ಟ ಸಮುದಾಯದ ವಿದ್ಯಾರ್ಥಿ ಯುವಜನರಿಗಾಗಿ ಕೌಶಲ್ಯ ತರಬೇತಿ ಕೇಂದ್ರ, ಐಎಎಸ್, ಐಪಿಎಸ್, ಕೆಎಎಸ್, ಐಎಫ್‌ಎಸ್, ಯುಪಿಎಸ್‌ಸಿ, ಕೆಪಿಎಸ್‌ಸಿ, ಮತ್ತಿತರ ಸ್ಪರ್ದಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳ ನಿರ್ಮಾಣ ಮಾಡುವ ಯೋಜನೆಯಿದ್ದು, ಸರ್ಕಾರವು ಹಿಂದೆ ಮಂಜೂರು ಮಾಡಿರುವ ಅನುದಾನವು ಸಾಕಾಗುವುದಿಲ್ಲ ಎಂದರು.
ಕರ್ನಾಟಕ ಸರ್ಕಾರ ಮಂಡಿಸಲಿರುವ 2026-27 ನೇ ಸಾಲಿನ ಬಜೆಟ್‌ನಲ್ಲಿ ವಾಡಿ ಪಟ್ಟಣದಲ್ಲಿ ನಿರ್ಮಾಣವಾಗಿತ್ತಿರುವ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ಹೆಚ್ಚುವರಿಯಾಗಿ 25 ಕೋಟಿ ರೂಪಾಯಿಗಳ ಅನುದಾನವನ್ನು ಮಂಜೂರು ಮಾಡಬೇಕು. ಅಂಬೇಡ್ಕರ್ ಭೇಟಿಯ ಕುರಿತು ಸಂಶೋಧನಾ ಗ್ರಂಥ ರಚನೆಗಾಗಿ ರೂ. 10 ಲಕ್ಷ ರೂಪಾಯಿ ವಿಶೇಷ ಅನುದಾನ ಮಂಜೂರು ಮಾಡಬೇಕು. ಅಂಬೇಡ್ಕರ್ ಸ್ಮಾರಕ ನಿರ್ಮಾಣಕ್ಕೆ ಮಂಜೂರು ಮಾಡಿದ ಭೂಮಿ ಡಾ.ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕದ ಹೆಸರಿಗೆ ನೊಂದಣಿ ಮಾಡಬೇಕು. ಹಾಗೂ ಆ ಭೂಮಿಯನ್ನು ಬೇರೆ ಯೋಜನೆಗೆ ಬಳಸದಂತೆ ಆದೇಶ ಮಾಡಬೇಕು. ಇಡೀ ಯೋಜನೆಯ ನೀಲನಕ್ಷೆ ತಯಾರಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸಬೇಕು. ಇಲ್ಲಿನ ಪ್ರತಿಯೊಂದು ಕಟ್ಟಡಗಳು ಬೌದ್ಧ ವಾಸ್ತು ಶಿಲ್ಪದ ಮಾದರಿಯಲ್ಲಿ ನಿರ್ಮಿಸಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಪಿಎಂಕೆ ಫ್ಯಾನ್ಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ರವಿ ಕೋಳಕೂರ, ಭಾರತೀಯ ಬೌದ್ಧ ಮಹಾ ಸಭಾದ ಜಿಲ್ಲಾ ಖಜಾಂಚಿ ಸಿದ್ದರಾಮ ನಡಗೇರಿ, ಸಾಮಾಜಿಕ ಕಾರ್ಯಕರ್ತೆ ರಮಾ ದೊಡ್ಡಮನಿ, ಭೀಮರತ್ನ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಮೈಲಾರಿ ದೊಡ್ಡಮನಿ ಇದ್ದರು.

