Oplus_0

ದಿಗ್ಗಾಂವ ಲಿಂ. ಶ್ರೀ ಗುರುಲಿಂಗೇಶ್ವರ ಶಿವಯೋಗಿಗಳ 22ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ ಫೆ.27 ರಿಂದ 5 ದಿನಗಳ ಕಾಲ ಶ್ರೀ ಕಾಳಿಕಾ ದೇವಿ ಚರಿತ್ರೆ ಕಾರ್ಯಕ್ರಮ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ದಿಗ್ಗಾಂವ ಸುಕ್ಷೇತ್ರ ಕಂಚಗಾರ ಹಳ್ಳದ ಶ್ರೀ ಪಾರ್ವತಿ ಪರಮೇಶ್ವರ ಕಲ್ಯಾಣ ಧಾಮದಲ್ಲಿ ಪ್ರತಿ ವರ್ಷದ ಪದ್ಧತಿಯಂತೆ ಈ ವರ್ಷವು ಕೂಡಾ ದೀನ ದಲಿತರ ಕಣ್ಮಣಿಯಾಗಿ ಭವರೋಗದ ವೈದ್ಯರಾಗಿ ಬಡವ-ಬಲಿದರ ಉಳವಿಗಾಗಿ ತಮ್ಮ ಬದುಕನ್ನೆ ಸಮರ್ಪಣೆ ಮಾಡಿರುವ ಸಕಲ ಭಕ್ತರ ಪೂಜ್ಯರಾದ ಲಿಂ. ಶ್ರೀ ಗುರುಲಿಂಗೇಶ್ವರ ಶಿವಯೋಗಿಗಳ 22ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತ 5 ದಿನಗಳ ಕಾಲ ಶ್ರೀ ಕಾಳಿಕಾ ದೇವಿ ಚರಿತ್ರೆ ಕಾರ್ಯಕ್ರಮ ಫೆ.27 ರಿಂದ ಮಾರ್ಚ್ 3 ರವರೆಗೆ ಪ್ರತಿ ನಿತ್ಯ ರಾತ್ರಿ 7 ಗಂಟೆಗೆ ನಡೆಯಲಿದೆ ಎಂದು ಶರಣಯ್ಯ ಸ್ವಾಮಿ ಸ್ಥಾವರಮಠ ತಿಳಿಸಿದ್ದಾರೆ.

ಮಾರ್ಚ್ 2 ರಂದು ಸಾಯಂಕಾಲ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಕಂಬಳೇಶ್ವರ ಶ್ರೀ ಸೋಮಶೇಖರ ಶಿವಾಚಾರ್ಯರರ ಅಮೃತ ಹಸ್ತದಿಂದ ನೇರವೆರಲಿದೆ. ಮಾರ್ಚ್ 3 ರಂದು ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ ಪೂಜಾ ನೆರವೇರಲಿದ್ದು, ಸಾಯಂಕಾಲ 4 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರವಂತರ ಆಟದೊಂದಿಗೆ ಸಕಲ ಮಂಗಲ ವಾದ್ಯಗಳೊಂದಿಗೆ ಹಾಗೂ ಕಲ್ಪ ಶ್ರೀರತ್ನ ಪೂಜ್ಯಶ್ರೀ ಮಲ್ಲಯ್ಯ ಮಹಾಸ್ವಾಮಿಗಳ ಇವರ ನೇತೃತ್ವದಲ್ಲಿ ನಡೆಯಲಿದೆ. ತದನಂತರ ಶ್ರೀ ಕಾಳಿಕಾ ದೇವಿ ಚರಿತ್ರೆ ಮಹಾಮಂಗಲ ಹಾಗೂ ಧಾರ್ಮಿಕ ಸಭೆ ಜರುಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಾಡಿನ ಅನೇಕ ಪರಮ ಪೂಜ್ಯರು ಹಾಗೂ ರಾಜಕೀಯ ಧುರಿಣರು ಪಾಲ್ಗೊಳ್ಳುವರು ಆದಕಾರಣ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತನು-ಮನ-ಧನದಿಂದ ಸೇವೆ ಸಲ್ಲಿಸಿ, ಪೂಜ್ಯತ್ರಯರ ಕೃಪೆಗೆ ಪಾತ್ರರಾಗಬೇಕು ಎಂದು ಕೋರಿದ್ದಾರೆ.

ಪಾಳಾ ಶ್ರೀ ಡಾ.ಗುರುಮೂರ್ತಿ ಶಿವಾಚಾರ್ಯರು ಇವರ ಅಮೃತ ವಾಣಿಯಿಂದ ಶ್ರೀ ಕಾಳಿಕಾ ದೇವಿ ಚರಿತ್ರೆ ಕಾರ್ಯಕ್ರಮ ಜರುಗುವುದು. ವಿನೋದಕುಮಾರ, ದಸ್ತಾಪೂರ ಸಂಗೀತ ಸೇವೆ ಹಾಗೂ ಷಣ್ಮುಖಯ್ಯ ಸ್ವಾಮಿ ಮಠಪತಿ ತಬಲಾ ಸೇವೆ ಸಲ್ಲಿಸುವರು ಎಂದು ಶರಣಯ್ಯ ಸ್ವಾಮಿ ಸ್ಥಾವರಮಠ ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!