Oplus_0

ಕಪನೂರ ಶಾಲಾ ವಾರ್ಷಿಕೋತ್ಸವ | ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ: ಮೂಲಗೆ 

ನಾಗಾವಿ ಎಕ್ಸಪ್ರೆಸ್ 

ಕಲಬುರಗಿ: ಸರ್ಕಾರಿ ಶಾಲೆಗಳಲ್ಲಿ ನುರಿತ ಹಾಗೂ ತರಬೇತಿ ಪಡೆದು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗದೆ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಕಪನೂರ ಸಿದ್ಧರೂಢ‌ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧುವಾರ ಸಂಜೆ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಖಾಸಗಿ ಶಾಲೆಗಳು ಆದ್ದೂರಿಯಾಗಿ ಆಚರಣೆ ಮಾಡುತ್ತವೆ. ಕಪನೂರ ಸಿದ್ಧರೂಢ ಕಾಲೋನಿಯ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಹಾಗೂ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರ ಸಹಕಾರ ಪಡೆದು ಆದ್ದೂರಿಯಾಗಿ ಶಾಲಾ ವಾರ್ಷಿಕೋತ್ಸವ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಅಫಜಲಪೂರದ ಮೂರುಜಾವಧ ಮಠದ ಶ್ರೀ ಬಾಲಯೋಗಿ ಪ್ರಣಾವನಿರಂಜನ ಸ್ವಾಮೀಜಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಉಚಿತ ಶಿಕ್ಷಣ ಒದಗಿಸುತ್ತಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಕ್ಷೀರಭಾಗ್ಯ ಯೋಜನೆ, ಪೌಷ್ಟಿಕ ಆಹಾರ ವಿತರಣೆ ಮತ್ತಿತರ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಸೌಲಭ್ಯ ಇದೆ. ಆದರೂ, ಪೋಷಕರು ಆಂಗ್ಲಭಾಷೆ ಮತ್ತು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹದಿಂದ ಅಧಿಕ ಶುಲ್ಕ ನೀಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶೇಖ ಮುಜಿಬ್, ಕಪನೂರ ಸಿ.ಆರ್ ಪಿ ದೀಲಿಪಕುಮಾರ, ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಅನು ಸುಂಟನೂರ, ಲಕ್ಷ್ಮೀಪುತ್ರ ಮೈತ್ರಿ, ಸಂತೋಷ‌, ಜಗನ್ನಾಥ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುವರ್ಣ ಎಸ್ ಗುತ್ತೇದಾರ, ಶಿಕ್ಷಣ ಪ್ರೇಮಿಗಳಾದ ನಾಗಯ್ಯ ಗುತ್ತೇದಾರ, ಶರಣಬಸಪ್ಪ ಖಂಡು, ಶ್ರೀಮಂತ ಬಿರಾದಾರ ಕೊರವಿ, ಶರಣಬಸಪ್ಪ ಪೂಜಾರಿ, ಗೌಡಯ್ಯ ಗುತ್ತೇದಾರ ಹಾಗೂ ಬಡಾವಣೆಯ ಮುಖಂಡರಾದ ಶ್ರೀಕಾಂತ ತೊಂಡಿ, ಶರಣು ಮೇತ್ರೆ, ಆಸಿಪ್ ಮಿಯಾ, ಮಂಜುನಾಥ ಗುತ್ತೇದಾರ, ಸಂಗಯ್ಯ ಗುತ್ತೇದಾರ, ಸಹ ಶಿಕ್ಷಕಿ ನೀಲಮ್ಮ ಅವರು ವೇದಿಕೆ ಮೇಲೆ ಇದ್ದರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಗುರು ಲಕ್ಷ್ಮೀ ವಹಿಸಿಕೊಂಡಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕ ಮೌನೇಶ ನಿಂಬಾಳ ಅವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು. ನಂತರ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Spread the love

Leave a Reply

Your email address will not be published. Required fields are marked *

error: Content is protected !!