ಚಿತ್ತಾಪುರ ಮತಕ್ಷೇತ್ರಕ್ಕೆ ಮಾ.20 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗಮನ: ಸಜ್ಜನಶೆಟ್ಟಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಮತಕ್ಷೇತ್ರದ ಮಾಲಗತ್ತಿ ಗ್ರಾಮದ ಶ್ರೀ ಹೀರೋಡೇಶ್ವರ ದೇವಸ್ಥಾನ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಚಿತ್ತಾಪುರ ಮಂಡಲ ವತಿಯಿಂದ ಮಾ.20 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ವರ್ಗ ಹಮ್ಮಿಕೊಳ್ಳಲಾಗಿದೆ, ಈ ಪ್ರಶಿಕ್ಷಣ ವರ್ಗದ ಉದ್ಘಾಟಕರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಗಮಿಸುತ್ತಿದ್ದಾರೆ ಎಂದು ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ ತಿಳಿಸಿದ್ದಾರೆ.
ಅಲ್ಲದೇ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಶಾಸಕರು ಮಾಜಿ ಶಾಸಕರು ಜಿಲ್ಲಾ ಪದಾಧಿಕಾರಿಗಳು ಆಗಮಿಸಲಿದ್ದಾರೆ, ಆದ್ದರಿಂದ ತಪ್ಪದೇ ಚಿತ್ತಾಪುರ ಮಂಡಲದ ಎಲ್ಲಾ ಪದಾಧಿಕಾರಿಗಳು, ಹಿರಿಯ ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರ ಪ್ರಮುಖ ಭೂತ ಅಧ್ಯಕ್ಷರು ಹಾಗೂ ವಿಶೇಷ ಆಹ್ವಾನಿತರು ಈ ಪ್ರಶಿಕ್ಷಣ ವರ್ಗಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.
ಮಾ. 20 ರಂದು ಬೆಳಗ್ಗೆ 9 ಗಂಟೆಗೆ ನೋಂದಣಿ ಮಾಡಿಕೊಳ್ಳಲಾಗುವುದು 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯುತ್ತದೆ ಆದ್ದರಿಂದ ಅಪೇಕ್ಷಿತರು ಬರುವಾಗ ಒಂದು ದಿನದ ವಸತಿ ಇರುತ್ತದೆ ಹೀಗಾಗಿ ದಿನ ಬಳಕೆ ವಸ್ತುಗಳು ತರಬೇಕು. ಮಾ. 21 ರಂದು ಬೆಳಗ್ಗೆ 11 ಗಂಟೆಗೆ ಸಮಾರೋಪ ಕಾರ್ಯಕ್ರಮದೊಂದಿಗೆ ಪ್ರಶಿಕ್ಷಣ ವರ್ಗ ಮುಕ್ತಾಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

