Oplus_0

ಚಿತ್ತಾಪುರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಅವರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಗೌರವ ಸನ್ಮಾನ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ದೇವಿಂದ್ರ ಎಂ. ಅರಣಕಲ್ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ಅವರನ್ನು ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಬುದ್ಧನ ಪ್ರತಿಮೆ ನೀಡಿ ಕೃತಜ್ಞತೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೋಲಿ ಕಬ್ಬಲಿಗ ಎಸ್ಟಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್, ತಾಪಂ ಮಾಜಿ ಅಧ್ಯಕ್ಷ ಶರಣಗೌಡ ಪಾಟೀಲ ಭಾಗೋಡಿ, ಎಪಿಎಂಸಿ ಮಾಜಿ ಸದಸ್ಯ ಹಣಮಂತ ಸಂಕನೂರ, ಮುಖಂಡರಾದ ಇಂದುಶೇಖರ್ ಬೆಂಕಿ, ಪ್ರಭು ಹಲಕರ್ಟಿ, ಬಸವರಾಜ ಚಿನ್ನಮಳ್ಳಿ, ನಾಗೇಂದ್ರ ಜೈಗಂಗಾ, ಬಸವರಾಜ ಪಾಟೀಲ ದಳಪತಿ, ಮಲ್ಲಪ್ಪ ಮಳಖೇಡ, ಪಾಶಾ ಶಿರೂರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!