ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಚಿತ್ತಾಪುರ ವೀರಶೈವ ಸಮಾಜದ ಮುಖಂಡರಿಂದ ಗೌರವ ಸನ್ಮಾನ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ತಾಲೂಕು ವೀರಶೈವ ಸಮಾಜದ ಪರವಾಗಿ ಗೌರವಾಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ ನೇತೃತ್ವದಲ್ಲಿ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಶಿವಲಿಂಗಪ್ಪ ವಾಡೇದ್, ಸೋಮಶೇಖರ ಪಾಟೀಲ ಬೆಳಗುಂಪಾ, ರಮೇಶ್ ಮರಗೋಳ, ಶಿವಾನಂದ ಪಾಟೀಲ, ಜಗಣ್ಣಗೌಡ ರಾಮತೀರ್ಥ, ಶಾಂತಣ್ಣ ಚಾಳೀಕಾರ, ಅಣ್ಣಾರಾವ ಬಾಳಿ, ಆನಂದ ಪಾಟೀಲ ನರಿಬೋಳ, ಮಲ್ಲಿನಾಥ ಭಾಗೋಡಿ, ರವೀಂದ್ರರೆಡ್ಡಿ ಭಂಕಲಗಿ, ಸಿದ್ದಣ್ಣಗೌಡ ದಳಪತಿ, ರವೀಂದ್ರ ರೆಡ್ಡಿ ಸೇರಿದಂತೆ ಇತರರು ಇದ್ದರು.

