Oplus_0

ತಾಲೂಕು ಆಡಳಿತ ವತಿಯಿಂದ ಜಯಂತಿ ಆಚರಣೆ | ಬಾಬು ಜಗಜೀವನರಾಮ್ ಕೊಡುಗೆ ಅವಿಸ್ಮರಣೀಯ: ಹಿರೇಮಠ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ಬಾಬು ಜಗಜೀವನರಾಮ್ ಅವರು ಸ್ವತಂತ್ರ ಭಾರತದ ನಿರ್ಮಾಣದಲ್ಲಿ, ವಿಶೇಷವಾಗಿ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಪ್ರಜಾ ಸೌಧ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಅವರ 119ನೇ ಜಯಂತ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಆಧುನಿಕ ಕೃಷಿ ಪದ್ಧತಿಗಳನ್ನು ಉತ್ತೇಜಿಸಿ, ದೇಶದಲ್ಲಿ ಆಹಾರದ ಕೊರತೆಯನ್ನು ನೀಗಿ ಆಹಾರ ಸ್ವಾವಲಂಬನೆ ಸಾಧಿಸಲು ಕಾರಣರಾದರು. ರಕ್ಷಣಾ ಸಚಿವರಾಗಿ ಭಾರತ-ಪಾಕಿಸ್ತಾನ ಯುದ್ಧದ ಸಮಯದಲ್ಲಿ ಯಶಸ್ವಿ ನಾಯಕತ್ವ ನೀಡಿ, ಬಾಂಗ್ಲಾದೇಶದ ಸೃಷ್ಟಿಗೆ ಕಾರಣರಾದರು. ಸ್ವತಂತ್ರ ಭಾರತದ ಮೊದಲ ಕಾರ್ಮಿಕ ಸಚಿವರಾಗಿ ಕನಿಷ್ಠ ವೇತನ ಕಾಯ್ದೆ, ಇಎಸ್‌ಐ ಕಾಯ್ದೆ ಮತ್ತು ಭವಿಷ್ಯ ನಿಧಿ ಕಾಯ್ದೆಯಂತಹ ಕಾರ್ಮಿಕರ ಹಕ್ಕುಗಳಿಗಾಗಿ ಶ್ರಮಿಸಿದರು ಎಂದು ಹೇಳಿದರು.

ಸಮಾಜ ಸೇವಕ ಜಿ.ಗೋಪಾಲರಾವ್ ತೆಲಂಗೆ ಉಪನ್ಯಾಸಕರಾಗಿ ಮಾತನಾಡಿ, ಶೋಷಿತ ಸಮುದಾಯಗಳ ಧ್ವನಿಯಾಗಿ, ಅಸ್ಪೃಶ್ಯತೆ ನಿರ್ಮೂಲನೆ ಮತ್ತು ಸಮಾನತೆಗಾಗಿ ಹೋರಾಡಿದ ಜಗಜೀವನರಾಮ್ ಅವರು ಮಹಾಮಾನವತಾವಾದಿ ಎಂದು ಹೇಳಿದರು.

ಬಾಬು ಜಗಜೀವನರಾಮ್ ಅವರು ಕೃಷಿ ಸಚಿವರಾಗಿ ಹಸಿರು ಕ್ರಾಂತಿಯನ್ನು ಮುನ್ನಡೆಸಿ ದೇಶವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿ ಮಾಡಿದರು. ಇಂದಿನ ತರುಣರು ಜಗಜೀವನರಾಮ್ ಅವರ ಜೀವನ ಚರಿತ್ರೆಯನ್ನು ಓದಿ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.

ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ, ಬಾಬು ಜಗಜೀವನರಾಮ್ ಸಮಿತಿ ಅಧ್ಯಕ್ಷ ರಾಜಣ್ಣ ಕರದಾಳ ಅವರು ಮಾತನಾಡಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ, ಸಮಾಜ ಕಲ್ಯಾಣಾಧಿಕಾರಿ ಚೇತನ್ ಗುರಿಕಾರ, ಪಿಎಸ್ಐ ಮಂಜುನಾಥ ರೆಡ್ಡಿ, ಲೋಕೋಪಯೋಗಿ ಎಇಇ ಮಹ್ಮದ್ ಇಸ್ಮಾಯಿಲ್, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶರಣಪ್ಪ ಮಂಠಾಳೆ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸುರಕರ್, ಕೃಷಿಕ ಸಮಾಜದ ಅಧ್ಯಕ್ಷ ನಾಗರೆಡ್ಡಿ ಗೋಪಸೇನ್, ಜಯಂತಿ ಸಮಿತಿ ಅಧ್ಯಕ್ಷ ಮರೇಪ್ಪ ಸಂದ್ಯಾನ್, ನ್ಯಾಯವಾದಿ ಎಸ್.ಎಂ ಹೋಳಿ, ತುಕಾರಾಮ ನಾಯಕ, ಮಹಾಂತೇಶ ಬೊಮ್ಮನಳ್ಳಿ, ರಮೇಶ್ ಕಟ್ಟಿ, ಸಂಜಯ್ ಬುಳಕರ್, ಬಸವರಾಜ ಕೆಬಿ, ನಾಗೇಶ್ ಹಲಗಿ, ಮಾರುತಿ, ಪರಶುರಾಮ ರಾಜಾಪುರ, ಗೌರಿಶಂಕರ ಕಾಳಗಿ ಸೇರಿದಂತೆ ಇತರರು ಇದ್ದರು. ಡಾ.ಶಂಕರ ಕಣ್ಣಿ ನಿರೂಪಿಸಿ ವಂದಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

Spread the love

Leave a Reply

Your email address will not be published. Required fields are marked *

error: Content is protected !!