Oplus_0

ಚಿತ್ತಾಪುರ ಅಗ್ನಿ ಶಾಮಕ ದಳದ ಕಚೇರಿಯಲ್ಲಿ ಧ್ವಜ ದಿನಾಚರಣೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ಅಗ್ನಿಶಾಮಕ ದಳದ ಕಚೇರಿಯಲ್ಲಿ ಧ್ವಜ ದಿನಾಚರಣೆಯ ಅಂಗವಾಗಿ ಅಗ್ನಿಶಾಮಕ ಠಾಣಾಧಿಕಾರಿ ನಾಗರಾಜ್ ಅವರು ಗೌರವಪೂರ್ವಕವಾಗಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷ ಏಪ್ರಿಲ್ 14 ರಿಂದ 20 ರವರೆಗೆ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸುವಾಗ ಏ. 19 ನೇ ತಾರೀಖಿನಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ‘ಧ್ವಜಾ ದಿನಾಚರಣೆ” ಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಅಗ್ನಿಶಾಮಕ ಠಾಣಾಧಿಕಾರಿ ಶರಣಯ್ಯ ಗುತ್ತೇದಾರ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!