Oplus_0

ಚಿತ್ತಾಪುರ ಟೌನ್ (ಎಸ್.ಸಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100 ಫಲಿತಾಂಶ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪಟ್ಟಣದ ನಾಗಾವಿ ಕ್ಯಾಂಪಸ್ ನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಚಿತ್ತಾಪುರ ಟೌನ್ (ಎಸ್.ಸಿ)  2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ ಎಂದು ಪ್ರಾಚಾರ್ಯ ಬಸವರಾಜ ಅವಂಟಿ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು 43 ವಿದ್ಯಾರ್ಥಿಗಳಲ್ಲಿ ಎಲ್ಲಾ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 29 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 2 ವಿದ್ಯಾರ್ಥಿಗಳು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳಲ್ಲಿ ಹರ್ಷಾನಂದ್ 594 (95.04%) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದು,  ಕೇಶವ್ ನಾಯ್ಕೋಡಿ 591 (94.56%) ಅಂಕಗಳನ್ನು ಪಡೆದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಈ ಅತ್ಯುತ್ತಮ ಸಾಧನೆಗೆ ಶಾಲೆಯ ಪ್ರಾಚಾರ್ಯ ಬಸವರಾಜ ಅವಂಟಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನವೇ ಈ ಯಶಸ್ಸಿಗೆ ಕಾರಣವೆಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!