ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥಕ್ಕೆ ಯಾದಗಿರಿ ಗಡಿಯಲ್ಲಿ ಚಿತ್ತಾಪುರ ತಾಲೂಕು ಆಡಳಿತ ವತಿಯಿಂದ ಭವ್ಯ ಸ್ವಾಗತ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಜಯ ಜ್ಯೋತಿ ರಥವನ್ನು ಯಾದಗಿರಿ ಗಡಿಯಲ್ಲಿ ಕುಂಬಾರಹಳ್ಳಿ-ನಾಲವಾರದ ಹತ್ತಿರ ಚಿತ್ತಾಪುರ ತಾಲೂಕು ಆಡಳಿತ ವತಿಯಿಂದ ಭಾನುವಾರ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರು ಕಲಬುರ್ಗಿ ಜಿಲ್ಲೆಗೆ ಸ್ವಾಗತಿಸಿದರು.
ನಂತರ ಮಾತನಾಡಿದ ಅವರು, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟದಲ್ಲಿ ವಿಜಯಗಳಿಸಿ 200 ವರ್ಷ ಪೂರೈಸಿರುವ ಹಿಲ್ಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಕಿತ್ತೂರು ರಾಣಿ ಚೆನ್ನಮ್ಮ ವಿಜಯ ರಥಯಾತ್ರೆ ಹಮ್ಮಿಕೊಂಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಾಡಿ ಪಿಎಸ್ಐ ತಿರುಮಲೇಶ್ ಕುಂಬಾರ, ಕಂದಾಯ ನಿರೀಕ್ಷಕ ಪ್ರಶಾಂತ್ ರಾಠೋಡ್ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.