ತುಷ್ಟೀಕರಣದ ಎಲ್ಲ ಮಿತಿಗಳನ್ನು ದಾಟಿರುವ ತುಘಲಕ್ ಕಾಂಗ್ರೆಸ್ ಸರ್ಕಾರ: ರಾಮತೀರ್ಥ ಟೀಕೆ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ನೈತಿಕತೆ, ಗೌರವಗಳೆಲ್ಲವನ್ನೂ ಗಾಳಿಗೆ ತೂರಿ, ಸಭ್ಯತೆಯ ಎಲ್ಲಾ ಮಿತಿಗಳನ್ನೂ ಈ ತುಘಲಕ್ ಕಾಂಗ್ರೆಸ್ ಸರ್ಕಾರ ದಾಟಿದೆ ಎಂದು ಬಿಜೆಪಿ ಹಿರಿಯ ಮುಖಂಡ ಅಯ್ಯಪ್ಪ ರಾಮತೀರ್ಥ ಕಟುವಾಗಿ ಟೀಕಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ, ದಾರ್ಷ್ಟ್ಯ ಮೆರೆದಿದ್ದಲ್ಲದೆ, ಆ ಸಮಯದಲ್ಲಿ ಅಂದಿನ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಹಾಗೂ ಎಸ್ಪಿಯವರ ವಾಹನಗಳ ಮೇಲೆ ಮಾರಕಾಸ್ತ್ರಗಳಿಂದ ಕಲ್ಲು ತೂರಾಟ ನಡೆಸಿದ್ದ ಘೋರ ಅಪರಾಧ ಮತ್ತು ಹೀನಾಯ ಕೋಮು ಗಲಭೆಯ 13 ಪ್ರಕರಣಗಳನ್ನು ಈ ತುಘಲಕ್ ಸರ್ಕಾರ ವಾಪಸ್ ಪಡೆದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಸಮಾಜದ ಶಾಂತಿ ಕದಡಿದ ಇಂತಹ ಗಂಭೀರ ಅಪರಾಧದ ಸಮಾಜ ವಿರೋಧಿ ಕಿಡಿಗೇಡಿಗಳನ್ನು ರಾಜಾರೋಷವಾಗಿ ಮುಕ್ತಗೊಳಿಸುವ ಮೂಲಕ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೀರಿ ಮುಖ್ಯಮಂತ್ರಿಗಳೇ? ಈ ಕಾಂಗ್ರೆಸ್ ಸರ್ಕಾರಕ್ಕೆ, ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ, ಹಿಂದೂಗಳ ಮನಸ್ಸಿಗೆ ಆಗಿರುವ ನೋವು, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕನಿಷ್ಠ ಸಂವೇದನೆ, ಗೌರವವಾದರೂ ಉಳಿದಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರೇ ಸ್ವತಃ ಈ ದುರುಳ ದಗಾಕೋರರ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸ್ಸು ಮಾಡಿರುವ ವರದಿ ಮತ್ತಷ್ಟು ಖೇದನೀಯ ಮಾತ್ರವಲ್ಲ ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ! ಇದು ನಿಜಕ್ಕೂ ಅತ್ಯಂತ ದುರ್ದೈವದ ಸಂಗತಿ ಎಂದು ತಿಳಿಸಿದ್ದಾರೆ.

ಕೇವಲ ನಿಮ್ಮ ಕೊಳಕು ಓಲೈಕೆಗಾಗಿ, ಸಮಾಜಘಾತುಕ ಶಕ್ತಿಗಳಿಗೆ, ಅಪರಾಧಿಗಳಿಗೆ ಕ್ಲೀನ್ ಚೀಟ್ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಬಹುಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಹಾಗೂ ನಾಡಿನ ಸುರಕ್ಷತೆಯನ್ನು ಮುಸ್ಲಿಂ ವೋಟ್ ಬ್ಯಾಂಕಿಗೆ ಅಡವಿಟ್ಟಿರುವ ನಿಮ್ಮ ಈ ಜನವಿರೋಧಿ ಧೋರಣೆಯನ್ನು ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ ಎಂದು ಕಟುವಾಗಿ ಎಚ್ಚರಿಸಿದ್ದಾರೆ.

Spread the love

Leave a Reply

Your email address will not be published. Required fields are marked *

error: Content is protected !!