Oplus_0

ರಸಗೊಬ್ಬರಕ್ಕಾಗಿ ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ: ದೇವಿಂದ್ರ ಅರಣಕಲ್ 

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಸಗೊಬ್ಬರಕ್ಕಾಗಿ ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ತಾಲೂಕು ಒಕ್ಕಲುತನ ಹುಟ್ಟುವಳ್ಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ತಿಳಿಸಿದ್ದಾರೆ.

ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಮುಂಗಾರು ಬಿತ್ತನೆಗೆ ರೈತರು ತರಾತುರಿ ನೀತಿ ಅನುಸರಿಸಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ ಬಾಕಿಯಿದೆ. ಅದಕ್ಕೂ ಮುಂಚೆ ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಕೃಷಿ ಪರಿಕರ ಮಾರಾಟ ಮಾಡುವ ಮಳಿಗೆಗಳಿಂದ ನಿಗಧಿತ ದರಕ್ಕಿಂತ ದುಬಾರಿ ಬೆಲೆಗೆ ರಸಗೊಬ್ಬರ ಖರೀದಿಸಬಾರದು. ತಾಲೂಕಿನ ರೈತರು ಬೇರೆ ತಾಲೂಕು, ದೂರದ ನಗರ ಪಟ್ಟಣಗಳಿಗೆ ಹೋಗಿ ಹೆಚ್ಚಿನ ಬೆಲೆ ಕೊಟ್ಟು ರಸಗೊಬ್ಬರ ಖರೀದಿಸಬಾರದು. ರೈತರಿಗೆ ಅಗತ್ಯ ರಸಗೊಬ್ಬರ ಪೂರೈಸಲು ಕೃಷಿ ಇಲಾಖೆಯೂ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ತಾಲೂಕಿನ ರೈತರು ರಸಗೊಬ್ಬರಕ್ಕೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!