ಆರೋಗ್ಯ ಸಂಜೀವಿನಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಬಳೂಂಡಗಿ
ನಾಗಾವಿ ಎಕ್ಸಪ್ರೆಸ್
ಕಲಬುರಗಿ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.
ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ. 1ರಿಂದಲೆ ಜಾರಿಗೊಳಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡಬೇಕು. ರಾಜ್ಯ ಸರ್ಕಾರದ ಅಧಿಕಾರಿ ಅಥವಾ ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯದ ಮಿತಿಯನ್ನು 17 ಸಾವಿರ ರೂ., ಗಳಿಂದ 27 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದರು.
ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಲಿಖಿತವಾಗಿ ಅ. 18ರೊಳಗೆ ಸಂಬಂಧಿಸಿದ ಡಿಡಿಓಗಳಿಗೆ ನೀಡಬೇಕು.
ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ-ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟ ಪಡಿಸಿರುವ ವಂತಿಕೆಯನ್ನು ಅಕ್ಟೋಬರ್ -2025ನೇ ತಿಂಗಳಿನಿಂದ ನೀಡಬೇಕು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ/ನೌಕರರು ಎಚ್ಆರ್ಎಂಎಸ್-1 ರಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
“ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಲಾಭವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಪಡೆದು ಕೊಳ್ಳ ಬೇಕು. ಯೋಜನೆ ಜಾರಿಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಕೃತಜ್ಞತೆ ತಿಳಿಸುತ್ತೇವೆ”.- ಬಸವರಾಜ ಬಳೂಂಡಗಿ, ಜಿಲ್ಲಾಧ್ಯಕ್ಷರು

