ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ
ನಾಗಾವಿ ಎಕ್ಸಪ್ರೆಸ್
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು ಬೆಂಗಳೂರಿನ ಅವರ ಸದಾಶಿವ ನಗರದ ನಿವಾಸದಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಹಾಗೂ ಕಾಂಗ್ರೆಸ್ ಸಮಾವೇಶ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸಚಿವ ಎನ್. ಎಸ್. ಬೋಸರಾಜು ಅವರು ಉಪಸ್ಥಿತರಿದ್ದರು.