ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಸುಬೇದಾರ ಆಗ್ರಹ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ತಾಲೂಕಿನ ವಚ್ಚಾ ಗ್ರಾಮದಲ್ಲಿ ಅತೆಚ್ಯವಾಗಿ ಅಕ್ರಮ ಮಾರಾಟ ಮಾಡಲಾಗುತ್ತಿದ್ದು ಅಧಿಕಾರಿಗಳು ಇದನ್ನು ಕೂಡಲೇ ತಡೆಹಿಡಿಯಬೇಕು ಎಂದು ಗ್ರಾಮದ ಮುಖಂಡ ಮಹಾಂತೇಶ ಸುಬೇದಾರ ಆಗ್ರಹಿಸಿದ್ದಾರೆ.
ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಕುಟುಂಬದವರು ಸೇರಿ ಗ್ರಾಮದ ಅನೇಕ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರತಿದಿನ ಕೂಲಿ ಕೆಲಸ ಮಾಡಿ ಬಂದ ಸುಮಾರು ಇನ್ನೂರ ರಿಂದ ಮುನ್ನೂರು ರೂಪಾಯಿ ಹಣ ಬರುತ್ತದೆ ಅದರಲ್ಲಿ 150 ರಿಂದ 300 ಹಣವನ್ನು ಕುಡಿತಕ್ಕೆ ಬಳಸುತ್ತಿದ್ದು ಸಂಸಾರ ನಡೆಸುವುದೇ ದುಸ್ತಾರವಾಗಿದೆ ಎಂದಿದ್ದಾರೆ.
ಈ ಅಕ್ರಮ ಮದ್ಯ ಮಾರಾಟ ನಿಷೇಧ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಮನವಿ ಮಾಡಿದರು ಸಹಿತ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ, ಅತಿ ಬೇಗನೆ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ನಿಷೇಧ ಮಾಡದಿದ್ದರೆ ಗ್ರಾಮದ ಮಹಿಳೆಯರು ಮತ್ತು ಪುರುಷರು ಸೇರಿಕೊಂಡು ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಿಗೆ, ಅಭಿವೃದ್ಧಿ ಅಧಿಕಾರಿಗಳಿಗೆ, ಪೋಲಿಸ್ ಇಲಾಖೆಗೆ, ಅಬಕಾರಿ ಇಲಾಖೆಗೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.