Oplus_0

ಎಂಎಲ್ಸಿ ಜಗದೇವ ಗುತ್ತೇದಾರ 5 ಲಕ್ಷ ಅನುದಾನ ಮಂಜೂರು | ಅಳ್ಳೋಳ್ಳಿ ಗ್ರಾಮದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಕಾಮಗಾರಿಗೆ ಚಾಲನೆ

ನಾಗಾವಿ ಎಕ್ಸಪ್ರೆಸ್

ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ 5 ಲಕ್ಷ ಅನುದಾನದಲ್ಲಿ ಕೈಗೊಂಡ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಕಾಮಗಾರಿಗೆ ಈಡಿಗ ಸಮಾಜದ ಮುಖಂಡರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈಡಿಗ ಸಮಾಜದ ಮುಖಂಡ ಮಲ್ಲಿಕಾರ್ಜುನ ಗುತ್ತೇದಾರ ಮಾತನಾಡಿ, ಅಳ್ಳೋಳ್ಳಿ ಗ್ರಾಮದಲ್ಲಿ ಈಡಿಗ ಸಮಾಜದ ಸಭೆ, ಸಮಾರಂಭ, ಮದುವೆ ಸೇರಿದಂತೆ ಸಣ್ಣ ಪುಟ್ಟ ಕಾರ್ಯಕ್ರಮಗಳು ಮಾಡಲು ಸಮುದಾಯ ಭವನದ ಅವಶ್ಯಕತೆ ಇದೆ, ಹೀಗಾಗಿ ಅನುದಾನ ಮಂಜೂರು ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ತಕ್ಷಣ ಸ್ಪಂದಿಸಿ ತಮ್ಮ ಶಾಸಕರ‌ ಅನುದಾನದಲ್ಲಿ ರೂ. 5 ಲಕ್ಷ ಮಂಜೂರು ಮಾಡಿದ್ದರಿಂದ ಅವರ ಅನುಮತಿ ಮೇರೆಗೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಆರ್’ಇ ಜೆಇ ಅಬ್ದುಲ್ ವಾಹೀದ್ ಅಲಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆಂಜನೇಯ ಗುತ್ತೇದಾರ, ಈಡಿಗ ಸಮಾಜದ ಮುಖಂಡರಾದ ಶ್ರೀಶೈಲ್ ಗುತ್ತೇದಾರ, ಮಲ್ಲಿಕಾರ್ಜುನ ಗುತ್ತೇದಾರ, ನರಸಯ್ಯ ಗುತ್ತೇದಾರ, ನಾರಾಯಣ ಗುತ್ತೇದಾರ ಸೇರಿದಂತೆ ಇತರರು ಇದ್ದರು.

Spread the love

Leave a Reply

Your email address will not be published. Required fields are marked *

error: Content is protected !!