ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ನಾಳೆ ಚಿತ್ತಾಪುರದಲ್ಲಿ ಪ್ರತಿಭಟನೆ: ಮಲ್ಲಿಕಾರ್ಜುನ ಬೆಣ್ಣೂರಕರ್
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರರವರ ಬಗ್ಗೆ ಅವಹೇಳನಕಾರಿ ಹಾಗೂ ಹಗುರವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮೀತ್ ಶಾ ರವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಚಿತ್ತಾಪುರ ತಾಲೂಕು ದಲಿತ ಸಮನ್ವಯ ಸಮಿತಿ ನೇತೃತ್ವದಲ್ಲಿ ಡಿಸೆಂಬರ್ 21 ರಂದು ಬೆಳಿಗ್ಗೆ 11ಗಂಟೆಗೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಲಾಡ್ಡಿಂಗ್ ಕ್ರಾಸವರೆಗೆ ಪ್ರತಿಭಟನೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಲಿತ ಬಂಧುಗಳು ಭಾಗವಹಿಸಬೇಕು ಎಂದು ದಲಿತ ಮುಖಂಡ ಮಲ್ಲಿಕಾರ್ಜುನ ಬೆಣ್ಣೂರಕರ್ ತಿಳಿಸಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವ ಅಮೀತ್ ಶಾ ಅಂಬೇಡ್ಕರ್ ಅವರ ಕುರಿತು ಹಗುರವಾಗಿ ಮಾತನಾಡುವುದು ಅಕ್ಷಮ್ಯ ಅಪರಾಧವಾಗಿದೆ ಕೂಡಲೇ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ದಲಿತ ಮುಖಂಡರಾದ ಶ್ರೀಕಾಂತ ಶಿಂಧೆ, ಮಲ್ಲಿಕಾರ್ಜುನ ಬೊಮ್ಮನಳ್ಳಿ, ಮಹೇಶ.ಎಸ್.ಕಾಶಿ, ನಾಗೇಂದ್ರ ಬುರ್ಲಿ ಆನಂದ್ ನಿಟ್ಟೂರ, ದೇವಿಂದ್ರ ಕುಮಸಿ, ಸುಭಾಶ್ಚಂದ್ರ ಪವಾರ, ಉದಯಕುಮಾರ ಸಾಗರ, ಸುಭಾಷ ಕಲ್ಮರಿ, ಸಂಜಯ ಬುಳಕರ್, ರಮೇಶ ಕವಡೆ ಅವರು ಒತ್ತಾಯಿಸಿದ್ದಾರೆ.