Oplus_0

ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ | ಎಲ್ಲರೂ ಒಗ್ಗೂಡಿ ಜಯಂತಿ ಕಾರ್ಯಕ್ರಮ ಮಾಡಲು ನಿರ್ಧಾರ: ಭೀಮಣ್ಣ ಸಾಲಿ 

ನಾಗಾವಿ ಎಕ್ಸಪ್ರೆಸ್ 

ಚಿತ್ತಾಪುರ: ತಾಲೂಕು ಆಡಳಿತ ವತಿಯಿಂದ ಜನವರಿ 21 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ಶಿಷ್ಟಾಚಾರದಂತೆ ಯಾವುದೇ ಲೋಪ ಆಗದಂತೆ ಆಚರಿಸಬೇಕು ಎಂದು ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.

ಪಟ್ಟಣದ ಪ್ರಜಾ ಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಎಲ್ಲರೂ ಒಗ್ಗೂಡಿ ಜಯಂತಿ ಕಾರ್ಯಕ್ರಮ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ ಮತ್ತು ನಿಂಗಣ್ಣ ಹೆಗಲೇರಿ ಇವರಿಬ್ಬರ ಹೆಸರುಗಳು ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಕು ಎಂದು ಮನವಿ ಮಾಡಿದರು.

ಯುವ ಮುಖಂಡ ಶಿವಕುಮಾರ ಸುಣಗಾರ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಜಯಂತಿ ಆಚರಣೆ ಮಾಡುವುದಿಲ್ಲ ಹೀಗಾಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಅಂಬಿಗರ ಚೌಡಯ್ಯ ಜಯಂತಿ ಕಡ್ಡಾಯವಾಗಿ ಆಚರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕು ಯುವ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಮಾತನಾಡಿ, ಕಳೆದ ವರ್ಷ ಕೆಲಕಡೆ ಅಂಬಿಗರ ಚೌಡಯ್ಯ ಜಯಂತಿ ಆಚರಿಸಿಲ್ಲ ಹೀಗಾದಾಗ ಸರ್ಕಾರಿ ಜಯಂತಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು. ಎಲ್ಲ ಇಲಾಖೆಗಳಲ್ಲಿ ಕಡ್ಡಾಯವಾಗಿ ಜಯಂತಿ ಕಾರ್ಯಕ್ರಮ ಆಚರಿಸುವಂತೆ ಆದೇಶ ಹೊರಡಿಸಬೇಕು ಎಂದು ಹೇಳಿದರು.

ತಹಸೀಲ್ದಾರ್ ನಾಗಯ್ಯ ಹಿರೇಮಠ ಮಾತನಾಡಿ, ಸಮಾಜದ ಮುಖಂಡರ ಅಭಿಪ್ರಾಯದ ಮೇರೆಗೆ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ಮಾಡಲಾಗುವುದು. ಅಂದು ಎಲ್ಲಾ ಇಲಾಖೆಗಳಲ್ಲಿ ಪೋಟೋ ಪೂಜೆ ಮಾಡಿ ತಾಲೂಕು ಆಡಳಿತ ವತಿಯಿಂದ ಪ್ರಜಾ ಸೌಧದ ಆವರಣದಲ್ಲಿ ಬೆಳಗ್ಗೆ 10 ಗಂಟೆ ಹಮ್ಮಿಕೊಳ್ಳುವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಸೂಚಿಸಿದರು.

ಸಭೆಯಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಂ ಪಾಷಾ, ಪಿಎಸ್ಐ ಮಂಜುನಾಥ ರೆಡ್ಡಿ, ಪಶು ವೈದ್ಯಾಧಿಕಾರಿ ಡಾ.ಶಂಕರ ಕಣ್ಣಿ, ಕೋಲಿ ಸಮಾಜದ ತಾಲೂಕು ಅಧ್ಯಕ್ಷರಾದ ಶಿವುಕುಮಾರ ಯಾಗಾಪೂರ, ನಿಂಗಣ್ಣ ಹೆಗಲೇರಿ, ತಾಲೂಕು ಯುವ ಅಧ್ಯಕ್ಷ ರಾಜೇಶ್ ಹೊಳಿಕಟ್ಟಿ, ಮುಖಂಡರಾದ ಭೀಮಣ್ಣ ಸೀಬಾ, ಸಂತೋಷ ಇವಣಿ, ರಾಮಲಿಂಗ ಬಾನರ್, ಕಾಶಪ್ಪ ಡೋಣಗಾಂವ, ಜೈಗಂಗಾ ವಾಡಿ, ತಮ್ಮಣ್ಣ ಡಿಗ್ಗಿ, ಶರಣಪ್ಪ ನಾಟೀಕಾರ, ಬಸವರಾಜ ಚಿನ್ನಮಳ್ಳಿ, ದಶರಥ ದೊಡ್ಡಮನಿ, ಶರಣು ಅರಣಕಲ್, ಭಾಗಣ್ಣ ಹಲಕಟ್ಟಿ, ಸಾಬಣ್ಣ ಡಿಗ್ಗಿ, ಅರುಣ ಯಾಗಾಪೂರ, ಸಾಬಣ್ಣ ಭರಾಟೆ, ಮದನ್ ಯಾಗಾಪೂರ, ಆನಂದ್ ಯರಗಲ್, ಮಲ್ಲಿಕಾರ್ಜುನ ಸಂಗಾವಿ, ನಾಗರಾಜ ಸಂಗಾವಿ ಸೇರಿದಂತೆ ಇತರರು ಇದ್ದರು. ಗ್ರೇಡ್ 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್ ಸ್ವಾಗತಿಸಿದರು.

Spread the love

Leave a Reply

Your email address will not be published. Required fields are marked *

error: Content is protected !!