ಚಿತ್ತಾಪುರದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಸರಳವಾಗಿ ಆಚರಣೆಗೆ ನಿರ್ಧಾರ | ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯ: ಭೀಮಣ್ಣ ಸಾಲಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಂಬಿಗರ ಚೌಡಯ್ಯ ಅವರ 906ನೇ ಜಯಂತಿಯನ್ನು ಈ ಬಾರಿ ಸರಳ ಹಾಗೂ ಶಿಸ್ತಿನ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೋಲಿ ಸಮಾಜದ ಸಂಘಟನೆಗೆ ಒಗ್ಗಟ್ಟು ಅಗತ್ಯವಾಗಿದೆ ಎಂದು ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು.
ಪಟ್ಟಣದ ಅಂಬಿಗರ ಚೌಡಯ್ಯ ಸಮುದಾಯ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ವರ್ಷ ಬೇರೆ ಬೇರೆ ರೀತಿಯಲ್ಲಿ ಜಯಂತಿ ಆಚರಣೆ ನಡೆದಿತ್ತು. ಆದರೆ ಈ ಬಾರಿ ಸಮಾಜದ ಸಂಘಟನೆಗಾಗಿ ಒಗ್ಗಟ್ಟಾಗಿ ಜಯಂತಿ ಆಚರಿಸುವ ದೃಢಸಂಕಲ್ಪ ಮಾಡಲಾಗಿದೆ. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಭಾವನೆಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಯಂತಿ ಕಾರ್ಯಕ್ರಮದ ವಿವರ:
ಜ.21ರಂದು ಬೆಳಿಗ್ಗೆ 10 ಗಂಟೆಗೆ ಲಾಡ್ಜಿಂಗ್ ಕ್ರಾಸ್‌ನಲ್ಲಿ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಗುವುದು. ನಂತರ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ತಾಲೂಕು ಆಡಳಿತ ವತಿಯಿಂದ ಪ್ರಜಾ ಸೌಧದ ಆವರಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ನಿಂಗಣ್ಣ ಹೆಗಲೇರಿ, ಶಿವಕುಮಾರ ಯಾಗಾಪುರ, ಮುಖಂಡರಾದ ಹಣಮಂತ ಸಂಕನೂರ್, ಗುಂಡು ಐನಾಪುರ, ಸಾಬಣ್ಣ ಭರಾಟೆ, ಪ್ರಭು ಹಲಕರ್ಟಿ, ಸುರೇಶ ಬೆನಕನಳ್ಳಿ,ರಾಜೇಶ ಹೋಳಿಕಟ್ಟಿ, ಮಲ್ಲಿಕಾರ್ಜುನ ಅಲ್ಲೂರಕರ್, ಲಕ್ಷ್ಮೀಕಾಂತ ಸಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

