ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ ಯಶಸ್ವಿಗೆ ಹಿರೇಮಠ ಕರೆ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಂಘ ಸಂಸ್ಥೆಗಳ ಮುಖಂಡರು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಕರೆ ನೀಡಿದ್ದಾರೆ.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದೇ ಸೆ.15 ರಂದು ಬೆಳಿಗ್ಗೆ 9 ಗಂಟೆಗೆ ತಾಲೂಕಿನ ಮಾಲಗತ್ತಿ ಕ್ರಾಸ್ ಹತ್ತಿರ ಎಲ್ಲ ಅಧಿಕಾರಿಗಳು, ಎಲ್ಲ ಸಂಘ ಸಂಸ್ಥೆಗಳ ಮುಖಂಡರು ಸೇರಬೇಕು ಅಲ್ಲಿಂದ ರಾವೂರ, ವಾಡಿ, ಬಲರಾಮ ಚೌಕ್, ಹಲಕರ್ಟಿ, ಡಿಗ್ಗಿ ತಾಂಡಾ, ಲಾಡ್ಲಾಪೂರ, ಕುಂಬಾರಹಳ್ಳಿ ಮೂಲಕ ಯಾದಗಿರಿ ಗಡಿ ಮಾರ್ಗದ 34 ಕಿ.ಮೀ ಉದ್ದದ ಮಾನವ ಸರಪಳಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತೋಟಗಾರಿಕೆ ಅಧಿಕಾರಿ ಶಂಕರಗೌಡ ಪಾಟೀಲ, ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ.ಶಂಕರ ಕಣ್ಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರತಿ ತುಪ್ಪದ್, ದೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ, ವಿಠಲರಾವ್, ಮುಖಂಡರಾದ ಧನರಾಜ್ ಯಾದವ್, ಸಿದ್ದಣ್ಣ ಗೌಡ ಆರ್.ಡಿ ದಿಗ್ಗಾಂವ ಸೇರಿದಂತೆ ಇತರೆ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು