ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ವಿಶ್ವಸಂಸ್ಥೆ ಮತ್ತು ಇತರೆ ಅಂತಾರಾಷ್ಟ್ರೀಯ ಸಂಸ್ಥೆಗಳು ಮಾನವ ಹಕ್ಕುಗಳ ರಕ್ಷಣೆ, ಅಭಿವೃದ್ಧಿ, ಶಾಂತಿ ಮತ್ತು ಸ್ಥಿರತೆಯ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು, ಅದರ ಮೌಲ್ಯಗಳನ್ನು, ತತ್ವಗಳನ್ನು ಎತ್ತಿಹಿಡಿಯಲು ಕರ್ನಾಟಕ ಸರ್ಕಾರ ಸೆ.15 ರಂದು ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿಯಲ್ಲಿ ಚಿತ್ತಾಪುರ ತಾಲೂಕಿನ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು ಭಾಗವಹಿಸಬೇಕು ಎಂದು ಪುರಸಭೆ ಸದಸ್ಯ ಜಗದೀಶ್ ಚವ್ಹಾಣ ಕೋರಿದ್ದಾರೆ.
ಸಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರ್ ನಿಂದ ಚಾಮರಾಜನಗರದ ವರೆಗೆ ಬೆಳಿಗ್ಗೆ 9:30 ಕ್ಕೆ ಮಾನವ ಸರಪಳಿ ನಿರ್ಮಿಸಲಾಗಿದೆ, ಕಾರಣ ಚಿತ್ತಾಪುರ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲರೂ ರಾವೂರ ಕ್ರಾಸ್ ಇಂದ ಬಲರಾಮ ಚೌಕ ವರೆಗೆ ನಡೆಯಲಿರುವ ಮಾನವ ಸರಪಳಿಯಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದ್ದಾರೆ .
ಮಾನವ ಸರಪಳಿಗೆ ಎಲ್ಲರೂ ಕೈ ಜೋಡಿಸೋಣ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯೋಣ, 12 ನೇ ಶತಮಾನದಲ್ಲಿ ಮಹಾತ್ಮ ಬಸವೇಶ್ವರ ಕಂಡಿರುವ ಕನಸು ಹಾಗೂ ಮಹಾ ಮಾನವತಾವಾದಿ ವಿಶ್ವ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಕಂಡಿರುವ ಕನಸು ನನಸು ಮಾಡೋಣ ಸವಿಧಾನ ಆಶಯವನ್ನು ಎತ್ತಿ ಹಿಡಿಯೋಣ ಈ ನಿಟ್ಟಿನಲ್ಲಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ. ಸಂವಿಧಾನ ಪೀಠಿಕೆಯನ್ನು ವಾಚನ ಮಾಡುವ ಮೂಲಕ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಹಾಗೂ ಜಾಗತಿಕವಾಗಿ ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವುದು ಮಾನವ ಸರಪಳಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.