ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿ
ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಭಾರತ: ಹಿರೇಮಠ
ನಾಗಾವಿ ಎಕ್ಸಪ್ರೆಸ್
ಚಿತ್ತಾಪುರ: ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಎಂದರೆ ಅದು ಭಾರತ ದೇಶದ ಪ್ರಜಾಪ್ರಭುತ್ವ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.
ತಾಲೂಕಿನ ರಾವೂರ್ -ವಾಡಿ -ಬಲರಾಮ್ ಚೌಕ್ -ಹಲಕಟ್ಟೆ -ಡಿಗ್ಗಿ ತಾಂಡಾ -ಲಾಡ್ಲಾಪುರ -ಕುಂಬರಹಳ್ಳಿ -ಯಾದಗಿರಿ ಗಡಿಯಲ್ಲಿ ಭಾನುವಾರ ನಡೆದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೊಂಡಿದೆ ಎಂದು ಹೇಳಿದರು.
ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವುದು ಹಾಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಎಲ್ಲರೂ ಒಂದೇ ಎನ್ನುವ ಸಮಾನತೆ ಸಾರುವ ಉದ್ದೇಶದಿಂದ ಬೀದರ್ ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸೇಡಂ ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಷಾ, ಅಧಿಕಾರಿಗಳಾದ ಡಾ.ಶಂಕರ ಕಣ್ಣಿ, ವಿಜಯಕುಮಾರ್ ಬಡಿಗೇರ್, ಶಂಕರಗೌಡ ಪಾಟೀಲ, ಮಹ್ಮದ್ ಇಸ್ಮಾಯಿಲ್, ಸಂಜೀವಕುಮಾರ ಮಾನಕರ್, ಪೊಲೀಸ್ ಅಧಿಕಾರಿಗಳು, ಸೇರಿದಂತೆ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ತಾಲೂಕಿನ ಜನಪ್ರತಿನಿದಿನಗಳು, ಸಂಘ ಸಂಸ್ಥೆಗಳ ಮುಖಂಡರು, ಗಣ್ಯರು, ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ.