Oplus_0

ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿದ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಲು ನಾಳೆ ತಿರಂಗಾ ಯಾತ್ರೆ: ಡಿಕೆಶಿ

ನಾಗಾವಿ ಎಕ್ಸಪ್ರೆಸ್

ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆಯು ನಡೆಸುತ್ತಿರುವ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಗೆ ಒಕ್ಕೊರಲಿನ ಬೆಂಬಲ ನೀಡುವುದು ಈ ದೇಶದ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ವೃತ್ತದವರೆಗೆ ಮೇ. 9 ರಂದು ಬೆಳಗ್ಗೆ 9.30 ರಿಂದ 10.30ರವರೆಗೆ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಾಹಿತಿಗಳು, ಚಿಂತಕರು, ವಿದ್ಯಾರ್ಥಿಗಳು, ಮಹಿಳೆಯರು, ಸರ್ಕಾರಿ ಮತ್ತು ಖಾಸಗಿ ಉದ್ದಿಮೆಗಳ ನೌಕರರು, ಸಂಘ-ಸಂಸ್ಥೆಗಳು, ಚಲನಚಿತ್ರ ರಂಗದವರು ಸೇರಿದಂತೆ ಪಕ್ಷಭೇದ ಮರೆತು ಸರ್ವರೂ ಈ ಯಾತ್ರೆಯಲ್ಲಿ ಭಾಗವಹಿಸಬೇಕೆಂದು ಕೋರಿದ್ದಾರೆ. ಯಾತ್ರೆಯಲ್ಲಿ ಭಾಗವಹಿಸುವವರು ಭಾರತದ ಧ್ವಜವನ್ನು ಮಾತ್ರ ಪ್ರದರ್ಶಿಸಬೇಕೆ೦ದು ಮನವಿ ಮಾಡಿದ್ದಾರೆ.

Spread the love

Leave a Reply

Your email address will not be published. Required fields are marked *

You missed

error: Content is protected !!